ವಿಜಯಪುರ: ‘ಹಿರಿಯ ನಾಯಕ ಲಾಲಕೃಷ್ಣ ಆಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದನ್ನು ಸ್ವಾಗತಿಸುತ್ತೇವೆ. ಅದಕ್ಕೆ ನಮ್ಮ ಯಾವುದೇ ತಕರಾರಿಲ್ಲ. ಆದರೆ, ತುಮಕೂರಿನ ಸಿದ್ದಗಂಗಾ ಮಠದ ಶ್ರೀಗಳಾದ ಲಿಂಗೈಕ್ಯ ಶಿವಕುಮಾರ ಸ್ವಾಮಿಜಿಗಳಿಗೂ ಭಾರತ ರತ್ನ ಗೌರವ ನೀಡಬೇಕು ಎಂಬುದು ನಮ್ಮ ಆಗ್ರಹ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬಸವನ ಬಾಗೇವಾಡಿಯಲ್ಲಿ ಬಸವಣ್ಣ ದೇಗುಲದಲ್ಲಿ ಶನಿವಾರ ಪೂಜೆ ಸಲ್ಲಿಸಿದ ನಂತರ, ಆಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
.ಎಲ್.ಕೆ.ಅಡ್ವಾಣಿಗೆ 'ಭಾರತ ರತ್ನ': ಪ್ರಧಾನಿ ನರೇಂದ್ರ ಮೋದಿ ಘೋಷಣೆ.
‘ನಮ್ಮ ರಾಜ್ಯದಲ್ಲಿ ಅನ್ನದಾಸೋಹಕ್ಕೆ ಹೆಸರಾಗಿದ್ದವರು ಶಿವಕುಮಾರ ಸ್ವಾಮೀಜಿಗಳು. ಅವರಿಗೆ ಈ ಗೌರವ ಸಲ್ಲಬೇಕು ಎಂಬುದು ನಮ್ಮ ಒತ್ತಾಯ. ಈ ಬಗ್ಗೆ ನಮ್ಮ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿತ್ತು. ಈ ವಿಚಾರದಲ್ಲಿ ತೀರ್ಮಾನ ಅವರಿಗೆ ಬಿಟ್ಟಿದೆ’ ಎಂದು ಹೇಳಿದರು.

ಬಸವಣ್ಣ ದೇಗುಲದಲ್ಲಿ ಪೂಜೆ ಸಲ್ಲಿಸಿದ ನಂತರ ಬಸವಣ್ಣನವರ ಪ್ರತಿಮೆಗೆ ಡಿಸಿಎಂ ಪುಷ್ಪನಮನ ಸಲ್ಲಿಸಿದರು.

ಸಚಿವ ಶಿವಾನಂದ ಪಾಟೀಲ, ಶಾಸಕ ಅಶೋಕ ಮನಗೂಳಿ ಇದ್ದರು.
.ಭಾರತ ರತ್ನ ಘೋಷಣೆ: ಆನಂದಭಾಷ್ಪ ಸುರಿಸಿದ ಎಲ್.ಕೆ. ಅಡ್ವಾಣಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.