ವಿಜಯಪುರ: ವಿಜಯಪುರ ನಗರದಲ್ಲಿ ಫೆ. 4 ಮತ್ತು 5 ರಂದು 37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದಲ್ಲಿ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿರುವ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಭೇಟಿಯಾಗಿ ಸಮ್ಮೇಳನ ಉದ್ಘಾಟನೆಗೆ ಆಹ್ವಾನ ನೀಡಿದರು.

ಜ. 9 ಮತ್ತು 10 ರಂದು ನಡೆಯಬೇಕಿದ್ದ ಸಮ್ಮೇಳನವನ್ನು ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಜ್ಯ ಸಮಿತಿ ಸದಸ್ಯ ಡಿ.ಬಿ. ವಡವಡಗಿ, ಸಹ ಖಜಾಂಚಿ ದೀಪಕ ಶಿಂತ್ರೆ, ಅಲ್ಲಮಪ್ರಭು ಮಲ್ಲಿಕಾರ್ಜುನಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.