ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಕರ್ತವ್ಯದೊಂದಿಗೆ ಆರೋಗ್ಯ ಕಾಳಜಿ ವಹಿಸಿ’

Published : 12 ಸೆಪ್ಟೆಂಬರ್ 2024, 16:14 IST
Last Updated : 12 ಸೆಪ್ಟೆಂಬರ್ 2024, 16:14 IST
ಫಾಲೋ ಮಾಡಿ
Comments

ವಿಜಯಪುರ: ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಗುರುವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಆರೋಗ್ಯ ತಪಾಸಣಾ ಶಿಬಿರ ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಾತನಾಡಿ, ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿ, ಸಿಬ್ಬಂದಿ ಗ್ರಾಮೀಣ ಜನರ ಸೇವೆ ಸಲ್ಲಿಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿದ್ದು, ಕರ್ತವ್ಯದೊಂದಿಗೆ ವೈಯಕ್ತಿಕ ಆರೋಗ್ಯದ ಕಡೆಗೂ ಗಮನ ಹರಿಸಬೇಕು. ಎಲ್ಲರೂ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಯೋಜನಾ ನಿರ್ದೇಶಕ ಸಿ.ಬಿ. ದೇವರಮನಿ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ, ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT