ವಿಜಯಪುರ: ಕಳೆದ ಕೆಲವು ದಿನಗಳಿಂದ ಜಿಲ್ಲೆಯಾದ್ಯಂತ ಸುರಿದ ಜಿಟಿ ಜಿಟಿ ಮಳೆಗೆ ಶುಕ್ರವಾರ ತಾಲ್ಲೂಕಿನ ಜುಮನಾಳ ಗ್ರಾಮದ ಸಾರ್ವಜನಿಕ ಶೌಚಾಲಯ ಕುಸಿದು ಮೂವರು ಮಹಿಳೆಯರು ಗಾಯಗೊಂಡಿದ್ದಾರೆ.

ವಿಜಯಪುರ ತಾಲ್ಲೂಕಿನ ಜುಮನಾಳ ಗ್ರಾಮದಲ್ಲಿ ಚರಂಡಿ ಮೇಲೆ ನಿರ್ಮಿಸಲಾಗಿದ್ದ ಸಾರ್ವಜನಿಕ ಶೌಚಾಲಯ ಶಿಥಿಲಾವಸ್ಥೆಗೆ ತಲುಪಿತ್ತು. ಶೌಚಾಲಯ ಕುಸಿಯುತ್ತಿದ್ದಂತೆ ಮೂವರು ಮಹಿಳೆಯರು ಚರಂಡಿಯೊಳಗೆ ಸಿಲುಕಿದರು. ಮಹಿಳೆಯರ ಚೀರಾಟ ಕೇಳಿ ಗ್ರಾಮಸ್ಥರು ಧಾವಿಸಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.

ಕಮಲಾಬಾಯಿ ಬಗಲಿ, ಮುಸ್ಕಾನ್ ಕೊಲ್ಹಾರ, ಮುರ್ತುಜಬಿ ಭಾಂಗಿ ಅವರ ಕಾಲು, ಬೆನ್ನಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಯಿತು. ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಒಬ್ಬ ಮಹಿಳೆಯ ಕಾಲಿಗೆ ಹೊಲಿಗೆ ಹಾಕಲಾಗಿದೆ. ವೃದ್ಧೆ ಮುರ್ತುಜಬಿ ಭಾಂಗಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದಲ್ಲಿ ಶೌಚಾಲಯ ಸಮಸ್ಯೆ ಬಹಳ ಇದೆ. ಮಹಿಳೆಯರಿಗೆ ಸುಸಜ್ಜಿತ ಶೌಚಾಲಯ ನಿರ್ಮಿಸಿ ಕೊಡಬೇಕು. ಶಿಥಿಲಗೊಂಡ ಶೌಚಾಲಯ ನೆಲಸಮ ಮಾಡಿ ಹೈಟೆಕ್ ಶೌಚಾಲಯ ನಿರ್ಮಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.