ವಿಜಯಪುರ: ‘ರೈತರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಆದಾಯ ದ್ವಿಗುಣಗೊಳಿಸಿಕೊಳ್ಳಲು ಶ್ರಮಿಸಬೇಕು’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಶಿವಕುಮಾರ್ ಹೇಳಿದರು.

ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯ, ವಿಸ್ತರಣಾ ನಿರ್ದೇಶನಾಲಯ ವತಿಯಿಂದ ಮಂಗಳವಾರ ನಡೆದ ‘ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ತಂತ್ರಜ್ಞಾನಗಳು’ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿಜಯಪುರದ ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ.ಬಾಲಚಂದ್ರ ನಾಯಕ, ‘ಕೃಷಿಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಮಾರಾಟದ ಬಗ್ಗೆ ಹೆಚ್ಚು ಒತ್ತು ಕೊಡುವುದು ಅವಶ್ಯಕವಾಗಿದೆ’ ಎಂದು ಹೇಳಿದರು.

ಕೃಷಿ ವಿಸ್ತರಣಾ ಕೇಂದ್ರದ ಸಹ ವಿಸ್ತರಣಾ ನಿರ್ದೇಶಕ ಡಾ.ಎಸ್.ಬಿ.ಕಲಘಟಗಿ, ‘ಎಲ್ಲಾ ಇಲಾಖೆಗಳ ಸಿಬ್ಬಂದಿ ರೈತರ ಮನೆಬಾಗಿಲಿಗೆ ತಂತ್ರಜ್ಞಾನವನ್ನು ತಲುಪಿಸಬೇಕು’ ಎಂದು ತಿಳಿಸಿದರು.

ವಿಶ್ರಾಂತ ಸಹ ಸಂಶೋಧನಾ ನಿರ್ದೇಶಕ ಡಾ.ಎಸ್.ಟಿ.ಚನ್ನಾಳ, ತರಬೇತಿಯ ಮಹತ್ವದ ಬಗ್ಗೆ ತಿಳಿಸಿದರು.

ಕೃಷಿ ವಿಸ್ತರಣಾ ಕೇಂದ್ರದ ಪ್ರಾಧ್ಯಾಪಕ ಡಾ.ಎಂ.ಎಸ್.ಧನಲಪ್ಪಗೋಳ ಸ್ವಾಗತಿಸಿದರು. ತಾಂತ್ರಿಕ ಅಧಿಕಾರಿ ಡಾ.ಎಸ್.ಎಂ.ವಸ್ತ್ರದ ನಿರೂಪಿಸಿ, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ವಿವೇಕ ದೇವರನಾವದಗಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.