ವಿಜಯಪುರ: ಜಿಲ್ಲೆಯ ಎಲ್ಲ ಅಂಗವಿಕಲರಿಗೆ ಒಂದು ತಿಂಗಳೊಳಗಾಗಿ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ ಕಾರ್ಡ್) ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಅಂಗವಿಕಲರಿಗೆ ವಿಶಿಷ್ಟ ಗುರುತಿನ ಚೀಟಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ತಾಲ್ಲೂಕಾವಾರು ಶಿಬಿರ ಆಯೋಜಿಸಿ ಅಂಗವಿಕಲರಿಗೆ ವಿಶಿಷ್ಟ ಗುರುತಿನ ಚೀಟಿ ದೊರೆಯುವಂತೆ ಮಾಡಬೇಕು ಎಂದರು.

ಅಂಗವಿಕಲರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲು ಹಾಗೂ ಅವರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಯುಡಿಐಡಿ ಕಾರ್ಡ್ ಅಂಗವಿಕಲರ ಗುರುತಿನ ಏಕೈಕ ದಾಖಲೆಯಾಗಿದ್ದು, ಇದನ್ನೇ ಅವರ ಅಂಗವೈಕಲ್ಯತೆಯ ಗುರುತಾಗಿ ಪರಿಗಣಿಸಲಾಗುತ್ತದೆ. ಇದರಿಂದ ಅವರು ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದ್ದು, ಅಂಗವಿಕಲರಿಗೆ ಇದೊಂದು ಬಹುಪಯೋಗಿಯಾಗಿದೆ. ಇದನ್ನು ಅವರಿಗೆ ದೊರಕಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್, ಜಿಲ್ಲೆಯ ವಿವಿಧ ವೈದ್ಯಾಧಿಕಾರಿಗಳು ಸೇರಿದಂತೆ ಅಂಗವಿಕಲ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.