ಯಾದಗಿರಿ: ಮೂರು ಕೃಷಿ ಕಾಯ್ದೆಗಳು, ವಿದ್ಯುತ್ ಮಸೂದೆ ರದ್ದಾತಿ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ, ಅಡುಗೆ ಅನಿಲ, ಡೀಸೆಲ್, ಪೆಟ್ರೋಲ್ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ನಗರ ಸೇರಿದಂತೆ ಜಿಲ್ಲೆಯಲ್ಲಿ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಸೋಮವಾರ ಬೆಳಿಗ್ಗೆ 6 ಗಂಟೆಗೆ ಕೇಂದ್ರ ಬಸ್ ನಿಲ್ದಾಣ ಬಳಿ ಜಮಾಯಿಸಿದ ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ನೀಡಿರುವ ಭಾರತ್ ಬಂದ್ಗೆ ಮಳೆ ನಡುವೆಯೂ ಹೋರಾಟಗಾರರು ಪ್ರತಿಭಟನೆ ನಡೆಸಿದರು.

ಕೇಂದ್ರ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ, ಆರ್ಎಸ್ಕೆ ಹಾಗೂ ವಿವಿಧ ಸಂಘಟನೆ ಸದಸ್ಯರಿಂದ ಮಳೆಯಲ್ಲಿಯೇ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಕಾಯ್ದೆಗಳನ್ನು ವಾಪಸ್ ಪಡೆಯಲು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ಕೇಂದ್ರದ ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಬಿಲ್, ಅಗತ್ಯ ವಸ್ತುಗಳ ಸರಕು ಸೇವಾ ಕಾಯ್ದೆ ಮತ್ತು ಗುತ್ತಿಗೆ ಕೃಷಿ ಕಾಯ್ದೆಗಳನ್ನು ಈ ಕೂಡಲೇ ಹಿಂಪಡೆಯಬೇಕು. ಭೂಸುಧಾರಣ ಕಾಯ್ದೆಯನ್ನು ರದ್ದು ಮಾಡಬೇಕು. ರೈತರ ಎಲ್ಲಾ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿಪಡಿಸಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನೀತಿಯನ್ನು ಕೈಬಿಡಬೇಕು. ಕಾರ್ಮಿಕ ವಿರೋಧಿ 04 ಕಾರ್ಮಿಕ ಸಂಹಿತೆಗಳನ್ನು ರದ್ದು ಮಾಡಬೇಕು. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಬೇಕು ಎಂದರು.

ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು. ಎಲ್ಲಾ ಆಹಾರ ಪದಾರ್ಥಗಳನ್ನು ಪಡಿತರ ಚೀಟಿ ಮೂಲಕ ವಿತರಣೆ ಮಾಡಬೇಕು. ಮಹಾತ್ಮ ಗಾಂದಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ವರ್ಷಪೂರ್ತಿ ಕಾರ್ಮಿಕರಿಗೆ ಕೆಲಸ ನೀಡಬೇಕು ಮತ್ತು ದಿನಕ್ಕೆ ₹600 ಕೂಲಿ ಪಾವತಿಸಬೇಕು ಎಂದು ಆಗ್ರಹಿಸಿದರು.

ನಂತರ ಭಾರತ್ ಬಂದ್ ಅಂಗವಾಗಿ ರಾಷ್ಟ್ರಪತಿಯವರಿಗೆ ಬರೆದಿರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರಿಗೆ ಮನವಿ ಪತ್ರ ಸ್ವೀಕರಿಸಿದರು.

ಇದಕ್ಕೂ ಮುನ್ನ ನಗರದ ವಿವಿಧ ಕಡೆ ಭಾರತ್ ಬಂದ್ ಅಂಗವಾಗಿ ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು.

ಆರ್ಕೆಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶರಣಗೌಡ ಗೂಗಲ್, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ್ ಸತ್ಯಂಪೇಟ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ದಾವಲಸಾಬ್ ನದಾಫ್, ಜಿಲ್ಲಾ ಉಪಾಧ್ಯಕ್ಷ ಚನ್ನಪ್ಪ ಆನೆಗುಂದಿ, ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ ಕೆ.ಸೋಮಶೇಖರ್ ಯಾದಗಿರಿ, ಸಿಐಟಿಯು ಜಿಲ್ಲಾ ಸಂಚಾಲಕ ಜೈಲಾಲ್ ತೋಟದಮನಿ, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಗುರುಸುಣಗಿ, ಎಐಯುಟಿಯುಸಿ ಜಿಲ್ಲಾ ಸಂಚಾಲಕಿ ಡಿ.ಉಮಾದೇವಿ, ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್, ರಾಜ್ಯ ರೈತ ಸಂಘದ ಮಹಿಳಾ ಘಟಕದ ರಾಜ್ಯಧ್ಯಕ್ಷೆ ನಾಗರತ್ನ ವಿ ಪಾಟೀಲ, ಚಂದ್ರಕಲಾ ಬಾಗೂರು ಸೇರಿದಂತೆ ಕೂಲಿ ಕಾರ್ಮಿಕರು, ರೈತರು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

ಪೊಲೀಸ್, ಹೋರಾಟಗಾರರ ನಡುವೆ ವಾಗ್ವಾದ
ಕೇಂದ್ರ ಬಸ್ ನಿಲ್ದಾಣ ಬಳಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅನ್ನು ಪ್ರತಿಭಟನಾನಿರತರು ತಡೆಯಲು ಮುಂದಾದರು. ಈ ವೇಳೆ ಪೊಲೀಸ್ ಹಾಗೂ ಪ್ರತಿಭಟನೆ ನಿರತರ ನಡುವೆ ವಾಗ್ವಾದ ಉಂಟಾಯಿತು.

ಭಾರತ್ ಬಂದ್ಗೆ ಬೆಂಬಲಿಸಿ ಬಸ್ ಬಂದ್ ಮಾಡಬೇಕೆಂದು ಹೋರಾಟಗಾರರ ಒತ್ತಾಯಿಸಿದರೆ, ಬಲವಂತವಾಗಿ ಬಸ್ ಬಂದ್ ಮಾಡಿಸದಂತೆ ಹೋರಾಟಗಾರರಿಗೆ ಪೊಲೀಸರ ಖಡಕ್ ಎಚ್ಚರಿಕೆ ನೀಡಿದರು.

ಪೊಲೀಸರ ಎಚ್ಚರಿಕೆಗೆ ಅಕ್ರೋಶಗೊಂಡ ಹೋರಾಟಗಾರರು ಬಂದ್ ಮಾಡುವಂತೆ ಒತ್ತಾಯಿಸಿದರು.

ನಂತರ ಬಸ್ ನಿಲ್ದಾಣ ಮುಂಭಾಗ ಧರಣಿ ಕುಳಿತ ಸಂಘಟನೆಗಳ ಮುಖಂಡರು ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸುಭಾಷ ವೃತ್ತದಲ್ಲಿ ಮಾನವ ಸರಪಳಿ
ನಗರದ ವಿವಿಧ ಪ್ರದೇಶಗಳಿಂದ ಪ್ರತಿಭಟನೆ ನಡೆಸಿದ ನಂತರ ವಿವಿಧ ಸಂಘಟನೆಗಳ ಹೋರಾಟಗಾರರು ಪ್ರತಿಭಟನಾ ಸ್ಥಳವಾದ ಸುಭಾಷ ವೃತ್ತಕ್ಕೆ ಬಂದು ಸೇರಿದರು.

ಈ ವೇಳೆ ಸರ್ಕಾರಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮಾನವ ಸರಪಳಿ ರಚಿಸಲಾಯಿತು. ನಾಲ್ಕು ದಿಕ್ಕುಗಳಿಂದ ವಾಹನ ಸಂಚಾರ ಸ್ಥಗಿತಗೊಂಡಿತು. ಬಸ್ ಸೇರಿದಂತೆ ವಿವಿಧ ವಾಹನಗಳನ್ನು ಪದವಿ ಮಹಾವಿದ್ಯಾಲಯದ ಮೂಲಕ ತೆರಳುವಂತೆ ಪೊಲೀಸರು ವ್ಯವಸ್ಥೆ ಮಾಡಿದ್ದರು. ಕಾಲೇಜು ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರು ವಾಹನಗಳನ್ನು ಬೇರೆ ಮಾರ್ಗದಲ್ಲಿ ಸಂಚರಿಸುವಂತೆ ಸೂಚಿಸುತ್ತಿದ್ದರು.

ವಿವಿಧ ಸಂಘಟನೆಗಳ ಮುಖಂಡರು, ಮಹಿಳೆಯರು ವೃತ್ತದಲ್ಲಿ ಕುಳಿತ ಧರಣಿ ಮಾಡಿದರು.

ಬೈಕ್ ರ್ಯಾಲಿ: ಪ್ರತಿಭಟನೆ ಅಂಗವಾಗಿ ನಗರದಲ್ಲಿ ಹೊಸ ಬಸ್ ನಿಲ್ದಾಣದಿಂದ ಬೈಕ್ ರ್ಯಾಲಿ ಆರಂಭವಾಯಿತು. ಶಾಸ್ತ್ರಿ ವೃತ್ತ, ರೈಲ್ವೆ ಸ್ಟೇಷನ್ ರಸ್ತೆ, ಹಳೆ ಬಸ್ ನಿಲ್ದಾಣ, ಸುಭಾಷ ವೃತ್ತ, ಪದವಿ ಮಹಾವಿದ್ಯಾಲಯ, ಹತ್ತಿಕುಣಿ ಕ್ರಾಸ್, ಗಾಂಧಿ ವೃತ್ತ, ಮೈಲಾಪುರ ಅಗಸಿ, ಗಂಜ್ ವೃತ್ತ, ಹೊಸಳ್ಳಿ ಕ್ರಾಸ್, ಹೊಸ ಬಸ್ ನಿಲ್ದಾಣ, ಶಾಸ್ತ್ರಿ ವೃತ್ತದ ಮೂಲಕ ಸುಭಾಷ ವೃತ್ತ ತಲುಪಿತು.

ಸೇವಾ ವಲಯವಾಗಿ ಸಾರ್ವಜನಿಕ ಆಸ್ತಿ ಆಗಿರುವ ವಿದ್ಯುತ್ ಕ್ಷೇತ್ರವನ್ನು ಕಾರ್ಪೊರೇಟ್ ಕಂಪನಿಗಳಿಗೆ ಮೂರು ಕಾಸು, ನಾಲ್ಕು ಕಾಸಿಗೆ ಮಾರಾಟ ಮಾಡಲು ವಿದ್ಯುತ್ ಮಸೂದೆಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಇದಕ್ಕೆ ತೀವ್ರ ವಿರೋಧವಿದೆ.
-ಕೆ.ಸೋಮಶೇಖರ್ ಯಾದಗಿರಿ,ಎಐಯುಟಿಯುಸಿ ರಾಜ್ಯ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.