ಶಹಾಪುರ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ತಿದ್ದುಪಡಿಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಕರೆ ನೀಡಿದ ಭಾರತ್ ಬಂದ್ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಹಲವೆಡೆ ಅಂಗಡಿ ಮುಗ್ಗಟ್ಟು ತೆರೆದಿದ್ದವು. ಸಾರಿಗೆ ವ್ಯವಸ್ಥೆ ಸಾಮಾನ್ಯವಾಗಿತ್ತು. ನಂತರ ವಿವಿಧ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಬಸವೇಶ್ವರ ವೃತ್ತದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಆಶ್ರಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಎಸ್ಡಿಪಿಐ ಕನ್ನಡಪರ ಸಂಘಟನೆ, ಪ್ರಗತಿಪರ ರೈತ ಸಂಘಟನೆ ಹಾಗೂ ವಿವಿಧ ಗ್ರಾಮದ ರೈತರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರನ್ನು ಉದ್ದೇಶಿಸಿ ಮಹೇಶಗೌಡ ಸುಬೇದಾರ ಹಾಗೂ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಆಶ್ರಫ ಮಾಚಾರ ಮಾತನಾಡಿ, ಅವರು, ದೆಹಲಿಯಲ್ಲಿ ನಡೆಯುತ್ತಿರುವ ದಾಖಲೆಯ ರೈತರ ಹೋರಾಟದಿಂದಲೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ರೈತರನ್ನು ಕಡೆಗಣಿಸಿದ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಎಚ್ಚರಿಸಿದರು.

ರೈತ ಮುಖಂಡರಾದ ಶಾಂತವೀರ ಪಾಟೀಲ, ಗಿರಿಯಪ್ಪಗೌಡ ಬಾಣತಿಹಾಳ, ನೀಲಕಂಠ ಬಡಿಗೇರ, ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಖಾಲಿದ್, ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಆರ್.ಚನ್ನಬಸ್ಸು ವನದುರ್ಗ, ಅಯ್ಯನಗೌಡ ಕನ್ಯಾಕೋಳೂರ, ಮಹಮ್ಮದ್ ಹನೀಫ್ ಖುರೇಶಿ, ಚಂದನಗೌಡ ಹಬ್ಬಳ್ಳಿ, ಶಿವಪುತ್ರ ಜವಳಿ, ಮಲ್ಲನಗೌಡ ಪರಿವಾಣ, ಬಸನಗೌಡ, ಆನಂದ, ಇದ್ದರು.

ವಡಗೇರಾ ಪಟ್ಟಣಕ್ಕೆ ಮುಟ್ಟದ ಬಂದ್ ಬಿಸಿ
ವಡಗೇರಾ: ಕೃಷಿ ಕಾಯ್ದೆ ತಿದ್ದುಪಡಿ,ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸೋಮವಾರ ನಡೆದ ದೇಶಾದ್ಯಂತ ಭಾರತ ಬಂದ್ಗೆ ಬೆಂಬಲಿಸಿ ಪಟ್ಟಣದಲ್ಲಿ ಪ್ರತಿಭಟನೆಗಳು ನಡೆಯದೆ ಎಂದಿನಂತೆ ಯಥಾಸ್ಥಿತಿ ಇತ್ತು. ಪಟ್ಟಣದಲ್ಲಿ ಬಹುತೇಕ ಸಂಘಟನೆಗಳು ಪ್ರತಿಭಟನೆ ಮಾಡದೆ, ಅವುಗಳ ಮುಖಂಡರು ಶಹಾಪುರ ಮತ್ತು ಯಾದಗಿರಿ ನಗರದಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗಿಯಾಗಿ ಬೆಂಬಲ ಸೂಚಿಸಿದರು.

‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.