ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಹಗ್ಗ ಜಗ್ಗಾಟ: ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕಗೆ ಒಳ ಏಟಿನ ಭೀತಿ

Published 1 ಮೇ 2024, 4:50 IST
Last Updated 1 ಮೇ 2024, 4:50 IST
ಅಕ್ಷರ ಗಾತ್ರ

ಶಹಾಪುರ: ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ ಶಹಾಪುರ ಕ್ಷೇತ್ರದಲ್ಲಿ ಮೈತ್ರಿಯ ಹಗ್ಗ ಜಗ್ಗಾಟ ಮುಂದುವರಿದಿದೆ. ಇದರಿಂದಾಗಿ ಬಿಜೆಪಿ ಹಾಗೂ ಒಳ ಏಟಿನ ಭೀತಿ ಆರಂಭವಾಗಿದೆ.

ವಿಧಾನಸಭೆ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ನಿರಾಕರಣೆಯಿಂದ ಬೇಸತ್ತು ಹೊರ ಬಂದು ಜೆಡಿಎಸ್ ಪಕ್ಷದ ಮೂಲಕ ಸ್ಪರ್ಧಿಸಿ ಸೋಲುಂಡಿದ್ದ ಮಾಜಿ ಶಾಸಕ ಗುರು ಪಾಟೀಲ ಶಿರವಾಳ ಅವರು ಮೈತ್ರಿ ಧರ್ಮದ ಪಾಲನೆಗೆ ಮುಂದಾಗುತ್ತಿಲ್ಲ. ಅಲ್ಲದೇ ತಮ್ಮ ಮುಂದಿನ ನಡೆ ಏನು ಎಂಬುವುದು ನಿಗೂಢವಾಗಿರಿಸಿದ್ದಾರೆ. ರಾಯಚೂರು ಲೋಕಸಭೆ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರು ನಡೆಸುತ್ತಿರುವ ಪ್ರಚಾರ ಕಾರ್ಯದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಅನಿಶ್ಚಿತತೆಯನ್ನು ಮುಂದುವರಿಸಿಕೊಂಡು, ಮೈತ್ರಿಯ ಸಮಸ್ಯೆಯನ್ನು ಜೀವಂತವಾಗಿರಿಸಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಮಾಜಿ ಶಾಸಕ ಗುರು ಪಾಟೀಲ ಶಿರವಾಳ ಅವರು ಪ್ರಬಲ ಲಿಂಗಾಯತ ಸಮುದಾಯದ ನಾಯಕ. ಅವರ ತಟಸ್ಥ ನಿಲುವು, ಅಭ್ಯರ್ಥಿಗಳಿಗೆ ಒಳ ಏಟು ನೀಡುವ ಲೆಕ್ಕಾಚಾರವನ್ನು ಅಲ್ಲಗಳೆಯುವಂತಿಲ್ಲ. ಬಿಜೆಪಿ ಮುಖಂಡರು, ನಮ್ಮ ಜತೆ ಪ್ರಚಾರಕ್ಕೆ ಬರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರೆ, ಕಾಂಗ್ರೆಸ್ಸಿನ ನಾಯಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾದರೆ ಸ್ವಾಗತವಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ ಇದ್ಯಾವುದಕ್ಕೂ ಪ್ರತಿಕ್ರಿಯೆ ನೀಡುತ್ತಿಲ್ಲ.

ಬಿಜೆಪಿ ನಾಯಕರು ಒಡೆದಾಳುವ ನೀತಿ ಅನುಸರಿಸುತ್ತ, ಜೆಡಿಎಸ್ ನಾಯಕರ ಕಡೆ ಚಿತ್ತ ಹರಿಸದೆ ಗ್ರಾಮೀಣ ಪ್ರದೇಶದಲ್ಲಿನ ಜೆಡಿಎಸ್ ಕಾರ್ಯಕರ್ತರನ್ನು ತಮ್ಮತ್ತ ಸೆಳೆದುಕೊಳ್ಳುವುದರ ಜತೆಗೆ ಪ್ರಚಾರದಲ್ಲಿ ಭಾಗವಹಿಸುವಂತೆ ನೋಡಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT