ಯಾದಗಿರಿ: ಮತಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ದೆಹಲಿಗೆ ತೆರಳಿದ್ದು ವರಿಷ್ಠರನ್ನು ಭೇಟಿಯಾಗಿ, ಯಾದಗಿರಿ ಕ್ಷೇತ್ರದ ಟಿಕೆಟ್ಗಾಗಿ ಲಾಬಿ ನಡೆಸಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ಮಾಹಿತಿ ನೀಡಿದರು.

ಆಕಾಂಕ್ಷಿಗಳಾದ ಚನ್ನಾರೆಡ್ಡಿ ಬಿಳ್ಹಾರ, ಶ್ರೀನಿವಾಸರೆಡ್ಡಿ ಚನ್ನೂರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ,ಶರಣಭೂಪಾಲರೆಡ್ಡಿ ನಾಯ್ಕಲ್, ಚಂದ್ರಶೇಖರಗೌಡ ಮಾಗನೂರ, ಅಂಬಯ್ಯ ಶಾಬಾದಿ, ದೇವರಾಜ ನಾಯಕ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಪ್ರಹ್ಲಾದ ಜೋಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣಸಿಂಗ್ ಅವರನ್ನು ಭೇಟಿಯಾಗಿದ್ದಾರೆ.

ಮತಕ್ಷೇತ್ರದಲ್ಲಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರ ವಿರೋಧಿ ಅಲೆಯಿದೆ, ಅವರಿಗೆ ಟಿಕೆಟ್ ನೀಡುವ ಬದಲು ತಮ್ಮಲ್ಲಿ ಯಾರಾದರೂ ಒಬ್ಬರಿಗೆ ಟಿಕೆಟ್ ನೀಡಿದರೆ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧ್ಯವಾಗಲಿದೆ ಎಂದು ವರಿಷ್ಠರಿಗೆ ಕೋರಿದ್ದಾರೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.