ಯಾದಗಿರಿ: ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ಕೊನೆಗಾಣಿಸಲು ಚನ್ನಪಟ್ಟಣ, ಶಿಗ್ಗಾವಿ, ಸಂಡೂರ ಉಪ ಚುನಾವಣೆಯಲ್ಲಿ ಕೈ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಹಣಮಂತ ಇಟಗಿ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಎರಡೂ ಕಡೆ ಬಿಜೆಪಿ, ಒಂದು ಕಡೆ ಎನ್ಡಿಎ ಅಭ್ಯರ್ಥಿ ನಿಖಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದಾರೆ. ನಾವು ಮೂರೂ ಕಡೆ ಗೆಲ್ತೀವಿ. ಈ ಚುನಾವಣೆ ಸಾರ್ವತ್ರಿಕ ಚುನಾವಣೆ ಅಲ್ಲ ಇದು ಉಪ ಚುನಾವಣೆ, ಮೂರು ಕ್ಷೇತ್ರದ ಮತದಾರರು ಪ್ರಜ್ಞಾವಂತಿಕೆಯಿಂದ ಮತ ಹಾಕಬೇಕು. ಒಂದೂವರೆ ವರ್ಷ ಕಾಂಗ್ರೆಸ್ ದುರಾಡಳಿತ ನೋಡಿರುವ ಜನರು ತಕ್ಕ ಪಾಠ ಕಲಿಸಬೇಕು. ಆ ಮೂಲಕ ಮುಂದಿನ ಮೂರೂವರೆ ವರ್ಷ ಮತ್ತದೇ ದುರಾಡಳಿತ ನಡೆಯಬಾರದು ಎಂದರೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಹೇಳಿದ್ದಾರೆ.

ಮೂರು ಕಡೆ ಗೆದ್ದರೆ ಕಾಂಗ್ರೆಸ್ನವರು ರಾಜ್ಯದ ಜನರನ್ನು ಲಘುವಾಗಿ ತೆಗೆದುಕೊಳ್ಳುತ್ತಾರೆ. ಹೀಗಾಗಿ ಒಂದೂವರೆ ವರ್ಷದ ಕಾಂಗ್ರೆಸ್ ಆಡಳಿತ ನೋಡಿ. ಎಸ್ಸಿ-ಎಸ್ಟಿ ಹಣ ಲೂಟಿ, ಮುಡಾ ಹಗರಣದಿಂದ ಅಭಿವೃದ್ಧಿ ಕೆಲಸ ಆಗ್ತಿಲ್ಲ. ಅದನ್ನು ಗಮನಿಸಿ, ಈ ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಮೊಳಗಿಸುವ ಸುವರ್ಣಾವಾಕಾಶ ಇದೆ. ಕಾಂಗ್ರೆಸ್ ಅಭ್ಯರ್ಥಿಗಳನ್ನು ಮೂರು ಕಡೆ ಸೋಲಿಸಿ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.