ಯಾದಗಿರಿ: ಹತ್ತಿ ಖರೀದಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಹತ್ತಿ ಖರೀದಿ ಕೇಂದ್ರಗಳಲ್ಲಿ ರೈತರಿಗೆ ತೂಕ ಮತ್ತು ಅಳತೆಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳ ಆಧಾರದಲ್ಲಿ ಅವರು ಅನಿರೀಕ್ಷಿತವಾಗಿ ನಗರದ ವಿವಿಧ ಹತ್ತಿ ಖರೀದಿ ಕೇಂದ್ರಗಳಿಗೆ ತೆರಳಿ ಅಲ್ಲಿನ ವಸ್ತುಸ್ಥಿತಿ ಅವಲೋಕಿಸಿದರು.

ಮುಂಡರಗಿ ರಸ್ತೆಯ ಮೌಲಾಲಿ ಅನಪುರ್ ರೈಸ್ ಮಿಲ್ ಬಳಿಯಿರುವ ಹಾಗೂ ಇಂಪಿರಿಯಲ್ ಗಾರ್ಡನ್, ಯಾದಗಿರಿ ಬಸ್ ಘಟಕದ ಎದುರುಗಡೆ ಇರುವ ಹತ್ತಿ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಹತ್ತಿ ಖರೀದಿ ಕೇಂದ್ರಗಳಿಂದ ರೈತರಿಗೆ ನೀಡಲಾದ ಬಿಲ್ಗಳನ್ನ ಪರಿಶೀಲಿಸಿದರು.

ಈ ವೇಳೆ ಅನಧಿಕೃತ ಕಡಿತಗಳ ಮೂಲಕ ರೈತರಿಂದ ಹಣ ವಸೂಲಿ ಮಾಡುತ್ತಿರುವ ಖರೀದಿದಾರರ ವಿರುದ್ಧ ಪ್ರಕರಣ ದಾಖಲು ಮಾಡುವಂತೆ ಸ್ಥಳದಲ್ಲಿದ್ದ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಂದಾಯ ನಿರೀಕ್ಷಕ ಗಿರೀಶ್, ಗ್ರಾಮ ಲೆಕ್ಕಿಗ ಶ್ರೀಧರ್ ಬಡಿಗೇರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.