ಭಾನುವಾರ, 22 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗುರುಮಠಕಲ್‌: ಸೆ.24ರಿಂದ ಶೇಂಗಾ ಬಿತ್ತನೆ ಬೀಜ ವಿತರಣೆ

Published : 22 ಸೆಪ್ಟೆಂಬರ್ 2024, 15:08 IST
Last Updated : 22 ಸೆಪ್ಟೆಂಬರ್ 2024, 15:08 IST
ಫಾಲೋ ಮಾಡಿ
Comments

ಗುರುಮಠಕಲ್‌: ಪ್ರಸಕ್ತ ಸಾಲಿನ ಹಿಂಗಾರು ಅವಧಿಯ ಬಿತ್ತನೆ ಚಟುವಟಕೆಗೆ ಪೂರಕವಾಗಿ ಮಂಗಳವಾರ (ಸೆ.24)ರಿಂದ ಶೇಂಗಾ ಬಿತ್ತನೆ ಬೀಜ ವಿತರಣೆ ಆರಂಭಿಸುವುದಾಗಿ ಕೃಷಿ ಅಧಿಕಾರಿ ಮಲ್ಲಿಕಾರ್ಜುನ ವಾರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೇಂಗಾ ಬಿತ್ತನೆ ಬೀಜಕ್ಕೆ ಸಾಮಾನ್ಯ‍ ವರ್ಗಗಳಿಗೆ ಪ್ರತಿ ಕ್ವಿಂಟಾಲಿಗೆ ₹11,550 ಮತ್ತು ಪರಿಶಿಷ್ಟ ವರ್ಗಗಳ ರೈತರಿಗೆ ₹10,550 ರಂತೆ ಧರದಲ್ಲಿ ಲಭ್ಯ.

ರೈತರು ಆಧಾರ್,‍ ನೀರು ಬಳಕೆ ಪ್ರಮಾಣ ಪತ್ರ, ಹೋಲ್ಡಿಂಗ್‌, ಬ್ಯಾಂಕ್‌ ಪಾಸ್‌ಬುಕ್‌ ಹಾಗೂ ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರೈತರು) ಪ್ರತಿಗಳು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಗುರುಮಠಕಲ್‌ ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT