ಯಾದಗಿರಿ: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಮತಕ್ಷೇತ್ರವಾರು ಕಾರ್ಯಕಾರಿ ಸಮಿತಿ ನಿರ್ದೇಶಕರ ಸ್ಥಾನಗಳಿಗೆ ನ.16 ರಂದು ಚುನಾವಣೆ ನಡೆಯಲಿದೆ ಎಂದು ನಿವೃತ್ತ ಶಿರಸ್ತೇದಾರರೂ ಆದ ಸಂಘದ ಚುನಾವಣಾಧಿಕಾರಿ ಪಿ.ಮಲ್ಲಿಕಾರ್ಜುನ ಹೇಳಿದ್ದಾರೆ.

ಕೃಷಿ ಇಲಾಖೆ ಸೇರಿದಂತೆ 49 ವಿವಿಧ ಇಲಾಖೆಗಳಿಂದ ಒಟ್ಟು 66 ಸ್ಥಾನಗಳಿಗೆ ನಿರ್ದೇಶಕರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರದ ಕನಕ ವೃತ್ತ ಸಮೀಪದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಭವನದಲ್ಲಿ ನಾಮಪತ್ರ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಸಲ್ಲಿಸುವ ಕಾರ್ಯ ಅ.28 ರಿಂದ ನ.7ರ ವರೆಗೂ ಇರಲಿದೆ. ನ.8 ರಂದು ಬೆಳಿಗ್ಗೆ 11ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಂದೇ ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ನ.11ರಂದು ಸಂಜೆ 4.30 ರೊಳಗಾಗಿ ನಾಮಪತ್ರ ವಾಪಸ್ ಪಡೆಯಬಹುದು. ನಂತರ ಸಂಜೆ 5.30 ಕ್ಕೆ ಅಂತಿಮವಾಗಿ ಕಣದಲ್ಲಿ ಉಳಿದವರ ಹೆಸರುಗಳು ಪ್ರಕಟಿಸಲಾಗುವುದು. ನ.16 ರಂದು ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಚುನಾವಣೆ (ಮತದಾನ) ನಡೆಯಲಿದೆ. ಮತದಾನ ಮುಗಿದ ನಂತರ ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಶೇ 80ರಿಂದ 90ರಷ್ಟು ಸ್ಥಾನಗಳು ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ. ಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಕಳೆದ ಐದು ವರ್ಷಗಳ ನಂತರ ಚುನಾವಣಾ ವ್ಯವಸ್ಥೆ ಬದಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.