ಶಹಾಪುರ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರದಲ್ಲಿ 390ಕ್ಕೂ ಹೆಚ್ಚು ಜನರಿಗೆ ಉಚಿತ ಶಸ್ತ್ರ ಚಿಕಿತ್ಸೆ ನೀಡಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಯಲ್ಲಪ್ಪ ಪಾಟೀಲ್ ಹುಲಕಲ್ ತಿಳಿಸಿದ್ದಾರೆ.

ಶಸ್ತ್ರ ಚಿಕಿತ್ಸೆಯ ನಂತರ ಮಾತನಾಡಿದ ಅವರು, ಬೆಂಗಳೂರಿನ ಜನಹಿತ ಐಕೇರ್ ಕೇಂದ್ರ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿವಾರಣ ಸಂಸ್ಥೆ ಮತ್ತು ತಾಲ್ಲೂಕು ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಶಹಾಪುರ ಸಹಯೋಗದಲ್ಲಿ ಶನಿವಾರ ಶಿಬಿರ ಹಮ್ಮಿಕೊಳ್ಳಲಾಗಿತ್ತು ಎಂದರು.

ಗ್ರಾಮೀಣ ಹಾಗೂ ನಗರ ಪ್ರದೇಶದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು. ಅದರಲ್ಲಿ 630 ಜನರಿಗೆ ನೇತ್ರ ತಪಾಸಣೆ ಮಾಡಿ ನಂತರ ಅಗತ್ಯವೆನಿಸಿದ ಅದರಲ್ಲಿ 390 ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಿದೆ. ಇನ್ನೂ 100ಕ್ಕೂ ಹೆಚ್ಚು ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಶಸ್ತ್ರ ಚಿಕಿತ್ಸೆ ಪಡೆದ ಕೆಲ ವ್ಯಕ್ತಿಗಳನ್ನು ತಮ್ಮ ಗ್ರಾಮಕ್ಕೆ ಕಳುಹಿಸಿದೆ. ಸಾರ್ವಜನಿಕ ಬಡ ಜನತೆಯು ಇದರ ಹೆಚ್ಚಿನ ಲಾಭ ಪಡೆದುಕೊಂಡರು ಎಂದು ಅವರು ಮಾಹಿತಿ ನೀಡಿದರು.

ಶಹಾಪುರ,ಯಾದಗಿರಿ ಸುರಪುರ, ವಾಡಿ ಚಿತ್ತಾಪುರ ತಾಲ್ಲೂಕು ಸೇರಿದಂತೆ ಹಾಗೂ ವಿವಿಧ ಗ್ರಾಮಗಳಿಂದ ನೇತ್ರ ರೋಗಿಗಳು ಶುಕ್ರವಾರ ರಾತ್ರಿಯೇ ಆಸ್ಪತ್ರೆಗೆ ಬಂದು ವಸತಿ ಮಾಡಿದ್ದರು. ಹೆಚ್ಚಿನ ಜನರು ಸೇರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಭು ಮಾನಕರ್, ಜಿಲ್ಲಾ ಆರೋಗ್ಯ ನಿವಾರಣೆ ಮತ್ತು ಅಂಧತ್ವ ನಿವಾರಣಾ ಆಡಳಿತಾಧಿಕಾರಿ ಡಾ.ಮಲ್ಲಪ್ಪ ಕರಣಜಿಗಿಕರ್, ಡಾ.ಜಗದೀಶ ಉಪ್ಪಿನ ಹಾಗೂ ಆಸ್ಪತ್ರೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.