ಯಾದಗಿರಿ: ಜಿಂದಾಲ್ ಕಂಪನಿಗೆ ರಾಜ್ಯ ಸರ್ಕಾರ ಒಂದು ಗುಂಟೆ ಭೂಮಿಯು ನೀಡಬಾರದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಿಂದಾಲ್ಗೆ ಭೂಮಿ ನೀಡುವ ಮೂಲಕ ರಾಜ್ಯವನ್ನು ಹರಾಜು ಮಾಡಲು ಹೊರಟಿದೆ. ಈ ಹಿಂದೆ ಸಾಕಷ್ಟು ಭೂಮಿಯನ್ನು ನೀಡಲಾಗಿದೆ. ಈಗ ಮತ್ತೆ ಭೂಮಿ ಪರಭಾರೆ ಮಾಡುವುದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ಸಂಪುಟ ತೀರ್ಮಾನ ಭೂಮಿ ನೀಡುವ ವಿಚಾರ ಹಿಂತೆಗೆದುಕೊಳ್ಳಬೇಕು. ಬರಗಾಲದ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಶೀಘ್ರ ಧಾವಿಸಬೇಕು ಎಂದು ಆಗ್ರಹಿಸಿದರು.

ಬರ ನಿರ್ವಹಣೆ ಕಾಮಗಾರಿಗೆ ಶೀಘ್ರ ತಲಾ ವಿಧಾನಸಭೆಗೆ ಕ್ಷೇತ್ರವಾರು ಮೂರು ಕೋಟಿ ಹಣ ಬಿಡುಗಡೆ ಮಾಡಬೇಕು. ಸಮರ್ಪಕವಾಗಿ ಕೇಂದ್ರ ಸರ್ಕಾರದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.