ಸೈದಾಪುರ: ‘ಹರಿದು ಹಂಚಿಹೋಗಿದ್ದ ಸಂಸ್ಥಾನಗಳನ್ನು ಒಂದುಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಪಟೇಲರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ’ ಎಂದು ಶಿಕ್ಷಕಿ ರೇಖಾ ಸಲಹೆ ನೀಡಿದರು.

ಪಟ್ಟಣದ ಗುರುಕುಲ ವಿದ್ಯಾಪೀಠ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪಟೇಲರು ಭಾರತದ ಪ್ರಮುಖ ಗಣ್ಯರಲ್ಲಿ ಒಬ್ಬರು. ಅವರ ದಿಟ್ಟ ನಿರ್ಧಾರದಿಂದ ಹೈದರಾಬಾದ್ ಕರ್ನಾಟಕಕ್ಕೆ ಸ್ವತಂತ್ರ್ಯ ದೊರಕಿತು ಎಂದು ತಿಳಿಸಿದರು.

ಸೋಲು ಗೆಲುವು ಸಾಮಾನ್ಯ. ಆದರೆ ಯಾವುದೇ ಕಾರ್ಯ ಕೈಗೊಳ್ಳುವ ಮುನ್ನ ದಿಟ್ಟ ನಿರ್ಧಾರ ತೆಗೆದುಕೊಂಡಾಗ ಮಾತ್ರ ಆ ಕಾರ್ಯದಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.

ಮುಖ್ಯಗುರು ಮಲ್ಲಿಕಾರ್ಜುನ, ಸಹ ಶಿಕ್ಷಕಿಯರಾದ ಮಹಾಲಕ್ಷ್ಮೀ, ಮಹೇಶ್ವರಿ, ಆಸೀಫಾ, ಶಂಕ್ರಮ್ಮ, ಮರಿಲಿಂಗಮ್ಮ ಹಾಗೂ ನೇತ್ರಾವತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.