ಯಾದಗಿರಿ: ಮೇಜರ್ ಧ್ಯಾನ್ ಚಂದ್ ಹುಟ್ಟುಹಬ್ಬದ ಪ್ರಯುಕ್ತ 2024-25ನೇ ಸಾಲಿನ 'ರಾಷ್ಟ್ರೀಯ ಕ್ರೀಡಾ ದಿನಾಚರಣೆ' ಮಿನಿ ಮ್ಯಾರಥಾನ್ ನಗರದಲ್ಲಿ ಗುರುವಾರ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣಾ ಮತ್ತು ಸಾಕ್ಷಾರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಮ್ಯಾರಥಾನ್ ಹಮ್ಮಿಕೊಳ್ಳಲಾಯಿತು.

ಹೊಸ ಬಸ್ ನಿಲ್ದಾಣ, ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಮಾರ್ಗವಾಗಿ ಕನಕದಾಸ ವೃತ್ತ, ಕಾಡ್ಲೂರ್ ಪೆಟ್ರೋಲ್ ಬಂಕ್, ಪದವಿ ಮಹಾವಿದ್ಯಾಲಯ ಹಾಗೂ ಜಿಲ್ಲಾ ಕ್ರೀಡಾಂಗಣದವರೆಗೆ ಮ್ಯಾರಥಾನ್ ಓಟ (5 ಕಿಮೀ) ಆಯೋಜಿಸಲಾಗಿತ್ತು.

ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಸಂಜೀವಕುಮಾರ ಸಿಂಗ್ ರಾಯಚೂರಕರ್ ಅವರು ಮ್ಯಾರಥಾನ್‌ಗೆ ಹೊಸ ಬಸ್ ನಿಲ್ದಾಣ ಮುಂದೆ ಚಾಲನೆ ನೀಡಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಹನುಮಂತ ರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರಣೇಶ, ಡಿವೈ ಎಸ್ಪಿ ಭರತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿ ರಾಜು ಬಾವಿಹಳ್ಳಿ ಭಾಗವಹಿಸಿದ್ದರು.

ಮ್ಯಾರಥಾನ್ ನಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.