ಗುರುವಾರ, 27 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊನಗೇರಾ ಆರೋಗ್ಯ ಕೇಂದ್ರಕ್ಕೆ ಕಾಯಕಲ್ಪ ಪ್ರಶಸ್ತಿ

Published 11 ಫೆಬ್ರುವರಿ 2024, 15:26 IST
Last Updated 11 ಫೆಬ್ರುವರಿ 2024, 15:26 IST
ಅಕ್ಷರ ಗಾತ್ರ

ಹೊನಗೇರಾ(ಯರಗೋಳ): 2022-23ನೇ ಸಾಲಿನ ಜಿಲ್ಲಾ ಮಟ್ಟದ ಕಾಯಕಲ್ಪ ‘ಅತ್ಯುತ್ತಮ ಪಿಎಚ್‌ಸಿ ಪ್ರಶಸ್ತಿ’ ಹೊನಗೇರಾ ಪ್ರಾಥಮಿಕ ಆರೊಗ್ಯ ಕೆಂದ್ರಕ್ಕೆ ಲಭಿಸಿದೆ.

ಆಸ್ಪತ್ರೆಯಲ್ಲಿ ಸ್ವಚ್ಛತೆ, ನೈರ್ಮಲ್ಯ ಮತ್ತು ಸೋಂಕು ನಿಯಂತ್ರಣವನ್ನು ಉತ್ತೇಜಿಸುವಲ್ಲಿ ಮಾಡಿದ ಪ್ರಯತ್ನಗಳನ್ನು ಗುರುತಿಸಿ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾಯಕಲ್ಪ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿತರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಜರಿದ್ದರು. ಕಾಯಕಲ್ಪ ಪ್ರಶಸ್ತಿ ದೊರತಿದ್ದಕ್ಕೆ ಯಾದಗಿರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಹೊನಗೇರಾ ಪ್ರಾಥಮಿಕ ಆರೋಗ್ಯ ವೈದ್ಯಾಧಿಕಾರಿ, ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT