ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಡೆಂಗಿ ಚಿಕೂನ್ ಪ್ರಕರಣಗಳು ಜುಲೈ ತಿಂಗಳಲ್ಲಿ ಪತ್ತೆಯಾಗಿಲ್ಲಡಾ.ಎಂ.ಎ.ಸಾಜೀದ್ ಜಿಲ್ಲಾ ಸರ್ವೇಕ್ಷಣಾಧಿಕಾರಿ
ಮಳೆಗಾಲಕ್ಕೆ ಸಂಬಂಧಿಸಿದಂತೆ ಎಲ್ಲ ಕಡೆ ಸ್ವಚ್ಛತೆಗೆ ಕ್ರಮಕೊಳ್ಳಲಾಗಿದೆ. ಅಂಬೇಡ್ಕರ್ ನಗರದಲ್ಲಿ ಈಚೆಗೆ ಕಾಲುವೆ ತೆರವು ಮಾಡಲಾಗಿದೆ.ಸಂಗಮೇಶ ಉಪಾಸೆ ನಗರಸಭೆ ಪೌರಾಯುಕ್ತ
ಯಾದಗಿರಿ–ಗುರುಮಠಕಲ್ ತಾಲ್ಲೂಕಿನಲ್ಲಿ ಆರೋಗ್ಯ ಇಲಾಖೆಯಿಂದ ಜಾಗೃತಿ ಕೈಗೊಂಡು ಎಲ್ಲ ಔಷಧಿಗಳನ್ನು ಸಂಗ್ರಹಿಸಿಕೊಳ್ಳಲಾಗಿದೆ. ಆಶಾ ಕಾರ್ಯಕರ್ತೆಯರ ಮೂಲಕವೂ ಜಾಗೃತಿ ಮೂಡಿಸಲಾಗುತ್ತಿದೆ.ಡಾ.ಹಣಮಂತರೆಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ಯಾದಗಿರಿ
ಜಿಲ್ಲೆಯಲ್ಲಿ ಮಳೆಯಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದೆ. ಶುದ್ಧ ನೀರಿನ ಘಟಕಗಳು ಬಂದ್ ಆಗಿದ್ದು ಕಲುಷಿತ ನೀರು ಸೇವಿಸಿದರೆ ಅನಾರೋಗ್ಯ ಉಂಟಾಗಲಿದೆ. ಸ್ಥಳೀಯ ಸಂಸ್ಥೆಗಳು ಸ್ವಚ್ಛತೆ ಕಾಪಾಡಬೇಕುಬಿ.ಎನ್.ವಿಶ್ವನಾಥ, ಸಾಮಾಜಿಕ ಕಾರ್ಯಕರ್ತ
ನಾಗರಿಕರು ತಮ್ಮ ಮನೆಯ ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಕಸದ ವಾಹನಕ್ಕೆ ನೀಡಿ. ನೈರ್ಮಲ್ಯ ಕಾಪಾಡಲು ನಗರಸಭೆಯೊಂದಿಗೆ ಕೈಜೊಡಿಸಿಶಿವಪುತ್ರ ನಡಿಗೇರಿ, ಸುರಪುರ ನಗರಸಭೆ ಆರೋಗ್ಯ ನಿರೀಕ್ಷಕ
ಮಲೇರಿಯಾ ಹಾಗೂ ಇನ್ನಿತರ ಕಾಯಿಲೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಡಂಗೂರ ಸಾರಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಸೂಚಿಸಿದೆ. ಸದ್ಯಕ್ಕೆ ಡೆಂಗಿ ಮಲೇರಿಯಾ ಕಾಯಿಲೆ ಬಗ್ಗೆ ವರದಿ ಬಂದಿಲ್ಲಡಾ.ರಮೇಶ ಗುತ್ತೆದಾರ, ಶಹಾಪುರ ತಾಲ್ಲೂಕು ಆರೋಗ್ಯ ಅಧಿಕಾರಿ
ಜನರು ತಮ್ಮ ಮನೆಯ ಸುತ್ತಮುತ್ತಲೂ ಸ್ವಚ್ಛತೆ ಕಾಪಾಡಿಕೊಳ್ಳಿ. ಮನೆಯಲ್ಲಿ ಬಹುದಿನದಿಂದ ಸಂಗ್ರಹವಾಗಿರುವ ನೀರನ್ನು ಕೂಡಲೇ ತೆರವುಗೊಳಿಸಿಡಾ. ರಾಜಾ ವೆಂಕಟನಾಯಕ, ಸುರಪುರ ತಾಲ್ಲೂಕು ಆರೋಗ್ಯಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.