ಯಾದಗಿರಿ: ಕಲಬುರಗಿಯಿಂದ ಬೆಂಗಳೂರಿಗೆ ಆರಂಭವಾದ ವಂದೇ ಭಾರತ್ ರೈಲು ಯಾದಗಿರಿಯಲ್ಲಿ ನಿಲುಗಡೆಗೆ ಒತ್ತಾಯಿಸಿ ಕರವೇ (ನಾರಾಯಣಗೌಡ ಬಣ) ಕಾರ್ಯಕರ್ತರು ಮಂಗಳವಾರ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಕರೆದೊಯ್ದರು.

ಪೊಲೀಸ್ ವಾಹನದ ಮುಂಭಾಗ ಕರವೇ ಕಾರ್ಯಕರ್ತರು ಮಲಗಿ ಪ್ರತಿಭಟಿಸಿದರು.

ವಂದೇ ಭಾರತ್ ರೈಲು ಸೇರಿದಂತೆ ಹಲವಾರು ರೈಲುಗಳು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗುತ್ತಿಲ್ಲ. ಕೂಡಲೇ ಎಲ್ಲ ಎಕ್ಸ್ ಪ್ರೆಸ್ ರೈಲುಗಳನ್ನು ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯ ಪ್ರಯಾಣಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನ್ಯಾಯ ಮಾಡುತ್ತಿವೆ. ಈ ಭಾಗದ ಸಂಸದ, ಶಾಸಕರು ರೈಲು ನಿಲುಗಡೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಪ್ರವೀಣ್ ಶೆಟ್ಟಿ ಬಣದಿಂದ ಮನವಿ: ವಂದೇ ಭಾರತ್ ಸೇರಿದಂತೆ ಹಲವು ರೈಲು ನಿಲುಗಡೆಗೆ ಒತ್ತಾಯಿಸಿ ಪ್ರವೀಣ್ ಶೆಟ್ಟಿ ಬಣದಿಂದ

ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಾಸ್ಟರ್ ಅವರ ಮೂಲಕ ಡಿ ಆರ್ ಎಂ ಗುಂತಕಲ್ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.