ಯಾದಗಿರಿ: ನಗರ ಪೊಲೀಸ್ ಠಾಣೆಯಲ್ಲಿ ಮುಂದುವರಿಯಲು ₹30 ಲಕ್ಷ ಹಣಕ್ಕೆ ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು, ಅವರ ಪುತ್ರ ಪಂಪನಗೌಡ (ಸನ್ನಿಗೌಡ) ಬೇಡಿಕೆ ಇಟ್ಟಿದ್ದರು ಎಂದು ಮೃತ ಪರಶುರಾಮ್ ಪತ್ನಿ ಶ್ವೇತಾ ಆರೋಪಿಸಿದ್ದಾರೆ.
.ಯಾದಗಿರಿ | ನಗರ ಠಾಣೆ ಪಿಎಸ್ಐ ಸಾವು: ದಲಿತ ಸಂಘಟನೆಗಳಿಂದ ಪ್ರತಿಭಟನೆ, ರಸ್ತೆ ತಡೆ.PSI ಪರಶುರಾಮ್ ಸಾವು: ಶಾಸಕ, ಪುತ್ರನ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು.
ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನನ್ನ ಪತಿ ಕಳೆದ 7 ತಿಂಗಳಿಂದ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಮತ್ತೆ ಸೆನ್ ಠಾಣೆಗೆ ವರ್ಗಾವಣೆ ಮಾಡಿದ್ದರು. ನಗರ ಠಾಣೆಯಲ್ಲಿ ಮುಂದುವರಿಯಲು ₹30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದಿದ್ದರು ಎಂದು ಹೇಳಿದರು.

ಅವಧಿ ಮುಗಿಯುವವರೆಗೆ ಇಲ್ಲಿ ಮುಂದುವರಿಸಲು ಹೇಳಿದಾಗ ಶಾಸಕ, ಅವರ ಪುತ್ರ ಹಣ ಕೊಡದಿದ್ದರೆ ಇಲ್ಲಿ ಯಾಕೆ ಇರುತ್ತಿ ಎಂದು ಹೇಳಿ ಜಾತಿ ನಿಂದನೆ ಮಾಡಿದ್ದಾರೆ. ಇದರಿಂದ ಖಿನ್ನತೆ ಒಳಗಾಗಿದ್ದರು ಎಂದು ಪತ್ನಿ ಆರೋಪಿಸಿದ್ದಾರೆ.

ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ’ಎಕ್ಸ್’ ಖಾತೆಯಲ್ಲಿ ವರ್ಗಾವಣೆ ದಂಧೆ ಬಗ್ಗೆ ಆರೋಪಿಸಿದ್ದಾರೆ.
.ಪಿಎಸ್ಐ ಸಾವು, ತನಿಖೆ ಬಳಿಕ ಸತ್ಯಾಂಶ ಹೊರಬರಲಿದೆ: ತಂಗಡಗಿ.ಪಿಎಸ್ಐ ಬಂಡೆ ಸಾವು: ವಿವಿಧೆಡೆ ಶ್ರದ್ಧಾಂಜಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.