ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ: ಕಂದಾಯ ಸಚಿವ ಆರ್. ಅಶೋಕ ಗ್ರಾಮ ವಾಸ್ತವ್ಯ

Last Updated 20 ಮಾರ್ಚ್ 2022, 7:44 IST
ಅಕ್ಷರ ಗಾತ್ರ

ದೇವತ್ಕಲ್ (ಯಾದಗಿರಿ): ಜಿಲ್ಲೆಯ ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದ ಪ್ರೌಢಶಾಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ ಗ್ರಾಮ ವಾಸ್ತವ್ಯ ಮಾಡಿದರು.

ಶನಿವಾರ ಸಂಜೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಅಧಿಕಾರಿಗಳ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡು ಬಂಜಾರ ಸಮುದಾಯದ ಹಾಡಿಗೆ ನೃತ್ಯ ಮಾಡಿ ಗಮನ ಸೆಳೆದರು.

ಭಾನುವಾರ ಬೆಳಿಗ್ಗೆ ಶಾಲೆ ಪಕ್ಕದಲ್ಲಿ ವಾಯುವಿಹಾರ ಮಾಡಿದ ಸಚಿವರು, ಭತ್ತದ ಗದ್ದೆ ದಂಡೆಯಲ್ಲಿ ಹುಲ್ಲು ಕಿತ್ತು ಹಸುಗೆ ತಿನಿಸಿದರು.

ಈ ವೇಳೆ ಸುರಪುರ ಶಾಸಕ ರಾಜೂಗೌಡ, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಪ್ರೌಢಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದರು
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಪ್ರೌಢಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿದರು

ಪರಿಶಿಷ್ಟರ ಕಾಲೊನಿಯಲ್ಲಿ ಕುಂದು ಕೊರತೆ ಆಲಿಕೆ: ಗ್ರಾಮ ವಾಸ್ತವ್ಯದ ಅಂಗವಾಗಿ ಕಂದಾಯ ಸಚಿವರು ಪರಿಶಿಷ್ಟರ ಕಾಲೊನಿಯ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಉಪಾಹಾರ ಸೇವಿಸಿ ಕುಂದು ಕೊರತೆ ಆಲಿಸಲಿದ್ದಾರೆ.

ಇದಾದ ನಂತರ ಕಲಬುರಗಿ ತೆರಳಿ ಅಲ್ಲಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT