ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಶಹಾಪುರ | ನಾಲ್ಕು ಸ್ಕ್ಯಾನಿಂಗ್ ಕೇಂದ್ರಕ್ಕೆ ಬೀಗ ಹಾಕಲು ಸೂಚನೆ

Published 25 ಜುಲೈ 2024, 15:10 IST
Last Updated 25 ಜುಲೈ 2024, 15:10 IST
ಅಕ್ಷರ ಗಾತ್ರ

ಶಹಾಪುರ: ನಗರದ ನಾಲ್ಕು ಸ್ಕ್ಯಾನಿಂಗ್ ಕೇಂದ್ರಗಳಿಗೆ ಬೀಗ ಹಾಕುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬಿ ಅವರು ಕುಟುಂಬ ಕಲ್ಯಾಣಾಧಿಕಾರಿ ಡಾ.ಜ್ಯೋತಿ ಅವರಿಗೆ ಸೂಚಿಸಿದರು.

ನಗರದ ಜೆ.ಪಿ ಸ್ಕ್ಯಾನಿಂಗ್ ಕೇಂದ್ರ, ಕ್ವಾಲಿಟಿ ಸ್ಕ್ಯಾನಿಂಗ್, ಸ್ಪಂದನಾ ಸ್ಕ್ಯಾನಿಂಗ್, ಕಿರಣ ಸ್ಕ್ಯಾನಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

‘ಪ್ರಸವ ಪೂರ್ವ ಭ್ರೂಣ ಪತ್ತೆ ಹಾಗೂ ಭ್ರೂಣ ಹತ್ಯೆ ಕಾಯ್ದೆ ಅಡಿ ಸ್ಕ್ಯಾನಿಂಗ್ ಕೇಂದ್ರಗಳು ಕೆಲಸ ನಿರ್ವಹಿಸುತ್ತಿವೆ. ಆದರೆ ಕಾಯ್ದೆಯ ನಿಯಮಗಳನ್ನು ಗಾಳಿಗೆ ತೂರಿ ಸ್ಕ್ಯಾನಿಂಗ್ ಕೇಂದ್ರಗಳು ಕೆಲಸ ನಿರ್ವಹಿಸುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ 34 ಸ್ಕ್ಯಾನಿಂಗ್ ಕೇಂದ್ರಗಳು ಕೆಲಸ ನಿರ್ವಹಿಸುತ್ತಿವೆ. ಸ್ಥಳದಲ್ಲಿ ಸೇವೆ ಸಲ್ಲಿಸುವ ವೈದ್ಯರು ಹಾಗೂ ಸಿಬ್ಬಂದಿಗಳು ಹೆಸರಿನ ನಾಮಫಲಕ ಅಳವಡಿಸಿಲ್ಲ. ದರಪಟ್ಟಿ ಹಾಕಿಲ್ಲ’ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವೀರಣ್ಣಗೌಡ, ಟಿಎಚ್ಒ ಡಾ.ರಮೇಶ ಗುತ್ತೆದಾರ, ಮಕ್ಕಳ ರಕ್ಷಣಾಧಿಕಾರಿ ಗೋವಿಂದ ರಾಠೋಡ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT