ಯಾದಗಿರಿ: ನಗರದ ಆರ್.ವಿ.ಕನ್ಸ್ಲ್ಟಿಂಗ್ ಸಿವಿಲ್ ಎಂಜಿನಿಯರಿಂಗ್ ಸಂಸ್ಥೆ ವತಿಯಿಂದ ನಗರದ ಮೆಥೋಡಿಸ್ಟ್ ಚರ್ಚ್ ಹಾಲ್ನಲ್ಲಿ ಮಂಗಳವಾರ ಎಂಜಿನಿಯರ್ಸ್ ದಿನಾಚರಣೆ ನಡೆಯಿತು.

‘ಸರ್ ಎಂ. ವಿಶ್ವೇಶ್ವರಯ್ಯ ಅವರ ಸ್ಮರಣೆಯಲ್ಲಿ ಎಂಜಿನಿಯರ್ಸ್ ದಿನಾಚರಣೆ ಮಾಡಲಾಗುತ್ತಿದೆ. ಈ ಹಿಂದೆ ತಾವು ಕೆಬಿಜೆಎನ್ಎಲ್ನಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರಾಗಿ ಕೆಲಸ ಮಾಡಿದ್ದೇನೆ’ ಎಂದು ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ಜಿಲ್ಲಾ ನಗರಾಭಿವೃದ್ದಿ ಕೋಶದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಕ್ಕಪ್ಪ ಹೊಸಮನಿ ಮಾತನಾಡಿ, ಸರ್ ಎಂ. ವಿಶ್ವೇಶ್ವರಯ್ಯನವರ ಕಾರ್ಯವೈಖರಿ ಎಂಜಿನಿಯರ್ಗಳಿಗೆ ಮಾದರಿ. ಅವರ ಮಾರ್ಗದರ್ಶನದಲ್ಲಿ ನಡೆಯಬೇಕು ಎಂದರು.

ದಾಸಬಾಳ ಮಠದ ವೀರೇಶ್ವರ ಸ್ವಾಮಿ, ಗುಬ್ಬೇವಾಡ ಸೋಮೇಶ್ವರ ಆಶ್ರಯದಕನ್ನಯ್ಯ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು.

ಆರ್.ವಿ. ಕನ್ಸಲ್ಟಿಂಗ್ ಸಿವಿಲ್ ಎಂಜಿನಿಯರ್ಸ್ ಸಂಸ್ಥೆಯ ರಾಜಕುಮಾರ ಗಣೇರ, ಬಿಜೆಪಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲಲಿತಾ ಅನಪುರ, ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರೆಡ್ಡಿ, ಡಿಡಿಯು ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಭೀಮಣ್ಣ ಮೇಟಿ, ಪ್ರಥಮ ದರ್ಜೆ ಗುತ್ತಿಗೆದಾರ ಸೂರ್ಯಕಾಂತ ಅಲ್ಲಿಪುರ, ನಾಗರಾಜ ಬೀರನೂರು ಇದ್ದರು.

‘ಬಿಎಸ್ವೈರನ್ನು ಕೆಳಗಿಳಿಸುತ್ತಾರೆ’
ಯಾದಗಿರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಿಗ ಶಾಸಕರು ಸಿಎಂ ತಮ್ಮ ಪೂರ್ಣ ಅವಧಿ ಪೂರೈಸುತ್ತಾರೆಂದು ಹೇಳಿಕೆ ನೀಡುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ಬಗ್ಗೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಆರು ತಿಂಗಳಲ್ಲಿ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುತ್ತಾರೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಭವಿಷ್ಯ ನುಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರೆಮರೆಯಲ್ಲಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಲು ಲೆಕ್ಕಾಚಾರ ನಡೆಯುತ್ತಿದೆ. ರಾಜ್ಯದಲ್ಲಿ ಸರ್ಕಾರ ನಿಷ್ಕ್ರಿಯವಾಗಿದೆ. ಮುಖ್ಯಮಂತ್ರಿಗಳಿಗೆ ವಯಸ್ಸಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದರಿಂದ ಬಹುತೇಕ ಸಚಿವರು ಅಸಮಾಧಾನಗೊಂಡಿದ್ದಾರೆ. ಸಿಎಂ ಬದಲು ಅವರ ಮಗ ಆಡಳಿತದಲ್ಲಿ ಹೆಚ್ಚಿನ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಅಸಮಾಧಾನಗೊಂಡ ಸಚಿವರು, ಈಗಾಗಲೇ ದೆಹಲಿಗೆ ತೆರಳಿ ಬಿಜೆಪಿ ಹೈಕಮಾಂಡ್ ನಾಯಕರ ಮುಂದೆ ಮುಖ್ಯಮಂತ್ರಿಗಳ ವಿರುದ್ಧ ಅಸಮಾಧಾನದ ಬಗ್ಗೆ ಹೇಳಿಕೊಂಡಿದ್ದಾರೆ. ಸಿಎಂ ಅವರನ್ನು ಬದಲಾವಣೆ ಮಾಡಿದರೆ ಮಾತ್ರ ಪಕ್ಷಕ್ಕೆ ಒಳ್ಳೆದಾಗುತ್ತದೆ ಎಂದು ಸಲಹೆ ನೀಡಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.