ಶಹಾಪುರ: ನಗರದ ಡಿಡಿಯು ಕಾನ್ವೆಂಟ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ (ಕನ್ನಡ ಮಾಧ್ಯಮ)ಯಲ್ಲಿ ಬುಧವಾರ ಪರೀಕ್ಷೆ ಬರೆಯುವ ವೇಳೆ ಅಸ್ವಸ್ಥಗೊಂಡು ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.

ತಾಲ್ಲೂಕಿನ ಕರ್ಕಳ್ಳಿ ತಾಂಡಾದ ಚೇತನ (16) ಮೃತ ವಿದ್ಯಾರ್ಥಿ.

ಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಚೇತನ ಅವರನ್ನು ಅನಾರೋಗ್ಯದ ಕಾರಣ ಎರಡು ದಿನಗಳ ಹಿಂದೆ ಪೋಷಕರು ಮನೆಗೆ ಕರೆದುಕೊಂಡು ಹೋಗಿದ್ದರು. ಬುಧವಾರ ಶಾಲೆಯಲ್ಲಿ ಕಿರು ಪರೀಕ್ಷೆ ಇದೆ ಎಂದು ವಿದ್ಯಾರ್ಥಿ ಶಾಲೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಸುಸ್ತಾಗಿ ವಾಂತಿ ಮಾಡಿಕೊಂಡು ಅಸ್ವಸ್ಥರಾದರು ಎಂದು ಹೇಳಲಾಗಿದೆ.

ವಿದ್ಯಾರ್ಥಿಯ ಶವವನ್ನು ತಾಂಡಾಕ್ಕೆ ತೆಗೆದುಕೊಂಡು ಹೋಗಿ ನಂತರ ನಗರದ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಯಿತು. ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಬಗ್ಗೆ ಶಹಾಪುರ ಪೊಲೀಸ್ ಠಾಣೆಯಲ್ಲಿ ರಾತ್ರಿವರೆಗೂ ಯಾವುದೇ ದೂರು ದಾಖಲಾಗಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.