ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ವಿಜೇತರಾಗಿದ್ದಾರೆ.

23 ಸುತ್ತಿನ ಮತ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲಿ ಮಾತ್ರ ಬಿಜೆಪಿ 14 ಮತಗಳ ಮುನ್ನಡೆ ಸಾಧಿಸಿತ್ತು. ಆ ನಂತರ ನಡೆದ 22 ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು.

ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ 1,14,886, ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ನರಸಿಂಹ ನಾಯಕ (ರಾಜೂಗೌಡ) 96,566 ಮತಗಳು ಪಡೆದಿದ್ದಾರೆ. 18,320 ಗೆಲುವಿನ ಅಂತರದಿಂದ ಕಾಂಗ್ರೆಸ್ ಗೆದ್ದಿದೆ.

ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ನಿಧನದಿಂದ ತೆರವಾಗಿದ್ದ ಸುರಪುರ ಕ್ಷೇತ್ರಕ್ಕೆ ಮೇ 7ರಂದು ಚುನಾವಣೆ ನಡೆದಿತ್ತು.

ಕಾಂಗ್ರೆಸ್ ಗೆಲುವಿಗೆ ಕಾರಣಗಳು

* ಅನುಕಂಪ

* ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು

* ಅಭ್ಯರ್ಥಿ ತಂದೆಯ ಜನಪ್ರಿಯತೆ

ಫಲಿತಾಂಶದ ವಿವರ

ನೋಟಾ- 848

ತಿರಸ್ಕೃತ ಮತಗಳು;216

ಒಟ್ಟು ಮತದಾನ -2,15,515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.