ಯಾದಗಿರಿ: ವಿದ್ಯಾರ್ಥಿಗಳು ಪುಸ್ತಕಗಳನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಶೈಕ್ಷಣಿಕ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಚಿರಂಜೀವಿ ಮೆಥೋಡಿಸ್ಟ್ ಸಂಸ್ಥೆ ಉಪಾಧ್ಯಕ್ಷ ಘನಸತ್ಯಾಮಿತ್ರ ಡಿ.ಎಸ್. ಅಯ್ಯರ ಅಭಿಪ್ರಾಯಪಟ್ಟರು.

ನಗರದ ಚಿರಂಜೀವಿ ಮೆಥೋಡಿಸ್ಟ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 2019-20ನೇ ಸಾಲಿನ 8, 9, 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಉಚಿತ ಪಠ್ಯ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪುಸ್ತಕಗಳ ಬಳಕೆ ಹಾಗೂ ರಕ್ಷಣೆ ಅತಿ ಮುಖ್ಯವಾಗಿದೆ. ಅವುಗಳು ಟಿಪ್ಪಣೆ ಮಾಡಿಕೊಳ್ಳಲು ಸೇರಿದಂತೆ ವಿವಿಧ ವಿಷಯಗಳನ್ನು ಪುನರ್ ಮನನ ಮಾಡುವಲ್ಲಿ ನೆರವು ನೀಡುತ್ತವೆ. ಈ ದಿಸೆಯಲ್ಲಿ ಮಕ್ಕಳಿಗೆ ಆರ್ಥಿಕ ತೊಂದರೆ ಆಗದಂತೆ ಶಿಕ್ಷಣ ಪಡೆಯುವಲ್ಲಿ ಸರ್ಕಾರ ಉಚಿತ ಪುಸ್ತಕಗಳನ್ನು ವಿತರಣೆ ಮಾಡುತ್ತಿವುದು ಉತ್ತಮ ಬೆಳವಣಿಗೆಯಾಗಿದೆ. ಇದರ ಸರಿಯಾದ ಸದುಪಯೋಗ ಮಕ್ಕಳಿಂದಾಗಬೇಕು ಎಂದು ಕಿವಿಮಾತು ಹೇಳಿದರು.

ಮುಖ್ಯಶಿಕ್ಷಕ ಜಯಪಾಲ ಮಾತನಾಡಿ, ದಾಖಲಾತಿ ಸೇರಿದಂತೆ ಹಾಜರಾತಿ ಅತಿ ಮುಖ್ಯವಾಗಿದೆ. ಇದಕ್ಕಾಗಿ ಶಿಕ್ಷಣ ಇಲಾಖೆ ಅನ್ನಭಾಗ್ಯ, ಕ್ಷೀರ ಭಾಗ್ಯ ಸೇರಿ ವಿವಿಧ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಇವುಗಳ ಬಳಕೆಯೊಂದಿಗೆ ಗುಣಾತ್ಮಕ ಶಿಕ್ಷಣ ಪಡೆಯುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.