ಯಾದಗಿರಿ: ತಂಬಾಕು ಸೇವೆನೆ ಆರೋಗ್ಯ ಹಾನಿಕರವಾಗಿದ್ದು, ಇದನ್ನು ತ್ಯಜ್ಯಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ ಹೇಳಿದರು.

ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ರಹಿತ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ಸಾವಿರಾರು ಜನರು ತಂಬಾಕು ಸೇವನೆಯಿಂದ ಮರಣಹೊಂದುತ್ತಿದ್ದಾರೆ. ಅಲ್ಲದೇ ಮಾರಣಾಂತಿಕ ಖಾಯಿಲೆಗಳಿಗೆ ಒಳಗಾಗುತ್ತಿದ್ದಾರೆ. ದೃಢ ನಿರ್ಧಾರ ಮಾಡಿ ತಂಬಾಕು ಸೇವನೆ ತ್ಯಜ್ಯಿಸಬೇಕು ಎಂದು ಸಲಹೆ ನೀಡಿದರು.

ಕೇಂದ್ರಿಯ ಬೀಡಿ ಆಸ್ಪತ್ರೆ ವತಿಯಿಂದ ಬೀಡಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರಿಗಾಗಿ ವಿಶ್ವ ತಂಬಾಕು ರಹಿತ ದಿನದ ಪ್ರಯುಕ್ತ ಉಚಿತ ಬಾಯಿ ಕ್ಯಾನ್ಸರಿನ ತಪಾಸಣೆ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಕೇಂದ್ರಿಯ ಬೀಡಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರಾವಂತಿ ಮತ್ತು ಡಾ.ಶ್ರಾವ್ಯ ವಿವರಿಸಿದರು. ತಂಬಾಕು ಸೇವನೆಯಿಂದ ಹೊರಬರಲು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವುದರೊಂದಿಗೆ ಕೌನ್ಸೆಲಿಂಗ್ ಮಾಡುವುದರ ಮೂಲಕ ಎನ್‌ಆರ್‌ಟಿ ಚಿಕಿತ್ಸೆ ನೀಡಲಾಯಿತು.

ಈ ವೇಳೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಧಿಕಾರಿ ಡಾ.ಭಗವಂತ ಅನ್ವರ್, ಜಿಲ್ಲಾ ಸರ್ವೇಕ್ಷಣಾ ಘಟಕದ ಅಧಿಕಾರಿ ಡಾ.ಸಾಜಿದ್, ಜಿಲ್ಲಾ ಆರ್ ಸಿ ಎಚ್ ಕಾರ್ಯಕ್ರಮದ ಅಧಿಕಾರಿ ಡಾ.ಲಕ್ಷ್ಮೀಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.