ಶಹಾಪುರ (ಯಾದಗಿರಿ): ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ಸಂರಕ್ಷಣೆಗೆ ಕೂಡಲೇ ಕಾಲುವೆ ಮೂಲಕ 2.75 ಟಿಎಂಸಿ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ತಿಳಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಶರಣಬಸಪ್ಪ ದರ್ಶನಾಪುರ ಮಾಹಿತಿ ನೀಡಿದ್ದಾರೆ.

ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಸಚಿವರ, ಶಾಸಕರ, ವಿಧಾನಪರಿಷತ್ ಸದಸ್ಯರ, ಜಿಲ್ಲಾಧಿಕಾರಿ, ನೀರಾವರಿ ಅಧಿಕಾರಿ ಹಾಗೂ ರೈತ ಮುಖಂಡರ ಸಭೆ ನಡೆಸಿದರು. ಬೇಸಿಗೆಯಲ್ಲಿ ಕುಡಿಯುವ ನೀರಿನ ಪ್ರಮಾಣವನ್ನು ಕಾಯ್ದಿರಿಸಿ ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆ ಸಂರಕ್ಷಿಸಲು ಕೂಡಲೇ 2.75 ಟಿಎಂಸಿ ಯಷ್ಟು ನೀರು ಹರಿಸಲು ಸರ್ಕಾರ ತೀರ್ಮಾನ ಕೈಗೊಂಡು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಲ್ಲೂಕಿನ ಭೀಮರಾಯನಗುಡಿ ಕೆಬಿಜೆಎನ್ಎಲ್ ನಿಗಮದ ಆಡಳಿತ ಕಚೇರಿಯ ಮುಂದೆ 20 ದಿನಗಳಿಂದ ಮೆಣಸಿನಕಾಯಿ ಬೆಳೆ ಬೆಳೆದ ರೈತರು ಧರಣಿ ನಡೆಸಿದ್ದರು. ರೈತರ ಹಿತದೃಷ್ಟಿಯಿಂದ ಕಾಲುವೆಗೆ ನೀರು ಹರಿಸಲು ಜಲಸಂಪನ್ಮೂಲ ಸಚಿವರಿಗೆ ಒತ್ತಡ ಹೇರಲಾಗಿತ್ತು. ಸರ್ಕಾರ ರೈತರ ಮನವಿಗೆ ಸ್ಪಂದಿಸಿದಕ್ಕೆ ರಾಜ್ಯ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ರೈತರ ಪರವಾಗಿ ಧನ್ಯವಾದ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.