ಯರಗೋಳ (ಯಾದಗಿರಿ ಜಿಲ್ಲೆ): ಇಲ್ಲಿಗೆ ಸಮೀಪದ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿ ಶನಿವಾರ ಅನುಮಾನಸ್ಪದವಾಗಿ ಗಿಡಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ಕಳೆದ 5 ದಿನಗಳಿಂದ ಕಾಣೆಯಾಗಿದ್ದ ಮಹಿಳೆ ಮಂಜುಳಾ (22) ಎಂದು ಗುರುತಿಸಲಾಗಿದೆ. ತಿಂಗಳ ಹಿಂದೆ ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲ್ಲೂಕಿನ ಅವರಾದಿ (ಬಿ) ಗ್ರಾಮದ ಮಲ್ಲಿಕಾರ್ಜುನ ಎನ್ನುವ ವ್ಯಕ್ತಿಗೆ ವಿವಾಹ ಮಾಡಿಕೊಡಲಾಗಿತ್ತು.

ವಾರದ ಹಿಂದೆ ಮಣ್ಣೆತ್ತಿನ ಅಮಾವಾಸ್ಯೆ ಹಬ್ಬಕ್ಕೆಂದು ತವರು ಮನೆಗೆ ಆಗಮಿಸಿದ್ದರು. ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಸ್ಥಳಕ್ಕೆ ಸಿಪಿಐ ಸೋಮಶೇಖರ್ ಕೆಂಚರೆಡ್ಡಿ, ಗ್ರಾಮೀಣ ಠಾಣೆ ಪಿಎಸ್ಐ ಸುರೇಶಕುಮಾರ ಚವಾಣ್, ಮಹಿಳಾ ಠಾಣೆಯ ಪಿಎಸ್ಐ ಶೀಲಾ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.