ಗುರುವಾರ, 3 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಯಾದಗಿರಿ: ನಗರಸಭೆ ಅಧ್ಯಕ್ಷರಾಗಿ ಲಲಿತಾ ಅನಪುರ, ಉಪಾಧ್ಯಕ್ಷರಾಗಿ ರುಕೀಯಾ ಬೇಗಂ

Published : 3 ಅಕ್ಟೋಬರ್ 2024, 10:52 IST
Last Updated : 3 ಅಕ್ಟೋಬರ್ 2024, 10:52 IST
ಫಾಲೋ ಮಾಡಿ
Comments

ಯಾದಗಿರಿ: ನಗರಸಭೆ ಅಧ್ಯಕ್ಷರಾಗಿ ಬಿಜೆಪಿಯಿಂದ ಲಲಿತಾ ಅನಪುರ, ಉಪಾಧ್ಯಕ್ಷರಾಗಿ ರುಕೀಯಾ ಬೇಗಂ ಆಯ್ಕೆಯಾದರು. ಅಧ್ಯಕ್ಷ ಸ್ಥಾನ ಸಾಮಾನ್ಯ ‌ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ಮಹಿಳೆಗೆ ಮೀಸಲಾಗಿತ್ತು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಆಕಾಂಕ್ಷಿಗಳಿಂದ ನಾಮಪತ್ರ ಸಲ್ಲಿಕೆಯಾಗಿತ್ತು. ಆದರೆ, ಬಿಜೆಪಿ ಬಹುಮತ ಸಾಬೀತು ಪಡಿಸಿ ಗದ್ದುಗೆ ಏರಿದೆ.

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲಲಿತಾ ಅನಪುರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರುಕೀಯಾ ಬೇಗಂ ತಲಾ 19 ಸ್ಥಾನಗಳನ್ನು ಪಡೆದಿದ್ದಾರೆ ಎಂದು ಚುನಾವಣಾಧಿಕಾರಿಯೂ ಆದ ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್ ತಿಳಿಸಿದರು.

ಕಾಂಗ್ರೆಸ್‌ನಿಂದ ಅಧ್ಯಕ್ಷ ಸ್ಥಾನಕ್ಕೆ ವಾರ್ಡ್ ಸಂಖ್ಯೆ 28ರ ಸದಸ್ಯೆ ಜಯಮ್ಮ ಸುರೇಶ್ ಮಡ್ಡಿ, ಉಪಾಧ್ಯಕ್ಷ ಸ್ಥಾನಕ್ಕೆ ವಾರ್ಡ್ ಸಂಖ್ಯೆ 1 ರ ಸದಸ್ಯೆ ಗೌಸಿಯಾ ಬೇಗಂ ಉಮೇದುವಾರಿಕೆ ಸಲ್ಲಿಸಿದ್ದರು.‌

ಈ ವೇಳೆ ಮಾತನಾಡಿದ ನೂತನ ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ, ನಗರದ ಸ್ವಚ್ಛತೆ ಮತ್ತು ಅಭಿವೃದ್ಧಿ ಕಡೆಗೆ ಒತ್ತು ನೀಡುತ್ತೇನೆ. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತೇವೆ ಎಂದು ಹೇಳಿದರು.

ಪಟಾಕಿ ಸಿಡಿಸಿ ಸಂಭ್ರಮ:

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಘೋಷಣೆಗೆ ಮುನ್ನವೇ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಉಸ್ತುವಾರಿ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾ ಘಟಕದ ಅಧ್ಯಕ್ಷ ಅಮಿನರೆಡ್ಡಿ ಯಾಳಗಿ, ಮುಖಂಡರಾದ ರಾಚನಗೌಡ ಮುದ್ನಾಳ, ದೇವಿಂದ್ರನಾಥ ನಾದ, ಹಣಮಂತ ಇಟಗಿ,  ಲಿಂಗಪ್ಪ ಹತ್ತಿಮನಿ, ರಮೇಶ ದೊಡ್ಡಮನಿ,  ಗುರು ಕಾಮಾ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ವೆಂಕಟರೆಡ್ಡಿ ಅಬ್ಬೆತುಮಕೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT