ಯಾದಗಿರಿ: ಯಾದಗಿರಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ (70) ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಮೂರ್ನಾಲ್ಕು ತಿಂಗಳಿಂದ ಕ್ಯಾನ್ಸರ್‌ಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. 1954ರ ಮಾರ್ಚ್ 28ರಂದು ಜನಿಸಿದ್ದರು. ಬಿ.ಕಾಂ ಪದವಿ ಪಡೆದಿದ್ದರು. 2018-2023 ರ ವರೆಗೆ ಶಾಸಕರಾಗಿದ್ದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿದ್ದರು. ಟಿಕೆಟ್‌ಗಾಗಿ ಕ್ಷೇತ್ರದಲ್ಲಿ ನಾಟಕೀಯ ಬೆಳವಣಿಗೆಗಳು ನಡೆದ್ದವು. ಆದರೂ ಮುದ್ನಾಳ ಟಿಕೆಟ್ ಪಡೆದ್ದರು.

ಬಿಎಸ್‌ವೈ ಆಪ್ತ: ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದ ವೆಂಕಟರೆಡ್ಡಿ ಮುದ್ನಾಳ ಅವರು, ಕೆಜೆಪಿಯಿಂದಲೂ ಸ್ಪರ್ಧಿಸಿದ್ದರು. ಯಡಿಯೂರಪ್ಪ ಬಿಜೆಪಿಗೆ ಮರಳಿದ ನಂತರ ಇವರು ಬಿಜೆಪಿ ಸೇರ್ಪಡೆಯಾಗಿದ್ದರು.

1995 ರಲ್ಲಿ ಯಾದಗಿರಿಯ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಅಣ್ಣನ ನಂತರ ತಮ್ಮ ನಿಧನ: ಮಾಜಿ ಶಾಸಕರಾಗಿದ್ದ ಡಾ.ವೀರಬಸವಂತರೆಡ್ಡಿ ಮುದ್ನಾಳ ಕಳೆದ ಎರಡು ತಿಂಗಳಿಂದ ಕಾನ್ಸರ್ ನಿಂದ ನಿಧನರಾಗಿದ್ದರು. ಅಣ್ಣನ ನಂತರ ತಮ್ಮ ನಿಧನರಾಗಿದ್ದಾರೆ ಎಂದು ಕ್ಷೇತ್ರದಲ್ಲಿ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಮುದ್ನಾಳ ಅವರ ಪಾರ್ಥಿವ ಶರೀರ ಯಾದಗಿರಿಗೆ ಮಂಗಳವಾರ ರಾತ್ರಿ ಕರೆತರಲಾಗುತ್ತದೆ. ಬುಧವಾರ ಸಂಜೆ ಯಾದಗಿರಿ ತಾಲ್ಲೂಕಿನ ಅವರ ಸ್ವ ಗ್ರಾಮದ ಮುದ್ನಾಳ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.