ಬೆಂಗಳೂರು: ಇಂಡೊ ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ (ITBP) ಕಾನ್ಸ್ಟೆಬಲ್ ಕ್ಷೌರಿಕ, ಸಫಾಯಿ ಕರ್ಮಚಾರಿ ಹಾಗೂ ಮಾಲಿ ಎಂಬ ಒಟ್ಟು 143 ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಇದೇ ಜುಲೈ 28 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದ್ದು ಆಗಸ್ಟ್ 26 ಕಡೆಯ ದಿನ. ಅರ್ಹ ಪುರುಷ, ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ₹ 100 ಇದ್ದು, ಎಸ್ಸಿ/ಎಸ್ಟಿ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಕಾನ್ಸ್ಟೆಬಲ್ ಕ್ಷೌರಿಕ, ಸಫಾಯಿ ಕರ್ಮಚಾರಿ ಹುದ್ದೆಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 23 ವರ್ಷ ವಯಸ್ಸು ಮೀರಿರಬಾರದು. ಮಾಲಿ ಹುದ್ದೆಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 25 ವರ್ಷ ವಯಸ್ಸು ಮೀರಿರಬಾರದು.

ಈ ಮೂರೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ತರಗತಿ ಪಾಸಾಗಿರಬೇಕು ಅಥವಾ ತತ್ಸಮಾನವಾದ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜೊತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.

ವಿವರವಾದ ಅಧಿಸೂಚನೆಗೆ ಹಾಗೂ ಆನ್ಲೈನ್ ಅರ್ಜಿ ಸಲ್ಲಿಸಲು recruitment.itbpolice.in ವೆಬ್ಸೈಟ್ ಪರಿಶೀಲಿಸಬೇಕು.
.Jobs: 44,228 ಗ್ರಾಮೀಣ ಅಂಚೆ ಸೇವಕ ಹುದ್ದೆಗಳು– ನೇಮಕಾತಿ ವಿಧಾನ ಹೇಗಿದೆ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.