ಬ್ಯಾಂ ಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್), ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಇತ್ತೀಚೆಗಷ್ಟೇ ನಾಲ್ಕುಸಾವಿರಕ್ಕೂ ಹೆಚ್ಚು ಸಿಬ್ಬಂದಿ ನೇಮಕಾತಿ ಮಾಡಿಕೊಳಲ್ಲು ಅರ್ಜಿ ಕರೆದಿತ್ತು. ಈತ ಮತ್ತೊಂದು ಸುತ್ತಿನ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ.

ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 3049 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಎಂದಿನಂತೆ, ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ.

ಒಟ್ಟು ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 462, ಪರಿಶಿಷ್ಟ ಪಂಗಡಕ್ಕೆ 234, ಹಿಂದುಳಿದ ವರ್ಗದವರಿಗೆ 829, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 300 ಹಾಗತೂ ಸಾಮಾನ್ಯ ವರ್ಗದವರಿಗೆ 1,224 ಹುದ್ದೆಗಳನ್ನು ಮೀಸಲಿಡಲಾಗಿದೆ.

ಆಗಸ್ಟ್ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಆಗಸ್ಟ್ 21, 2023 ಕೊನೆ ದಿನ. ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಬಳಸಬೇಕಾದ ಲಿಂಕ್: www.ibps.in ಮತ್ತು https://ibpsonline.ibps.in/crppo13jun23/

ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಮಾನ ಅರ್ಹತೆ.

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 30 ವರ್ಷಗಳು(01.08.2023ಕ್ಕೆ ಅನ್ವಯಿಸುವಂತೆ). ಎಸ್‌ಸಿ/ ಎಸ್.ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹ 850. ಎಸ್‌ಸಿ/ಎಸ್‌ಟಿ/ಅಂಗವಿಲ ಅಭ್ಯರ್ಥಿಗಳು/ಮಾಜಿ ಯೋಧರಿಗೆ ₹175.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್‌ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರವನ್ನು ಹೊಂದಿರಬೇಕು.

ಶುಲ್ಕಪಾವತಿ: ನೋಂದಣಿ ನಂತರ ಅಭ್ಯರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್ ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ.

ಪರೀಕ್ಷಾ ಪ್ರಕ್ರಿಯೆ: ಇದೇ ಅಕ್ಟೋಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ, ನವೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ 2024ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ. ಎರಡೂ ಪರೀಕ್ಷೆಗಳು ಆನ್‌ಲೈನ್‌ನಲ್ಲಿ ನಡೆಯುಲಿವೆ.

ರಾಜ್ಯದ 13 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 3 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ನ ಡೆಯಲಿದೆ.

ಪೂರ್ವಭಾವಿ ಪರೀಕ್ಷೆಗೆ ತರಬೇತಿ: ಐಬಿಪಿಎಸ್ ವತಿಯಿಂದ ಎಸ್.ಸಿ/ಎಸ್.ಟಿ/ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳು, ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಪೂರ್ವಭಾವಿ ಪರೀಕ್ಷಾ ತರಬೇತಿ ಬೆಂಗಳೂರು, ಹುಬ್ಬಳ್ಳಿ, ಕಲ್ಬುರ್ಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತರಬೇತಿ ನಡೆಯಲಿದೆ. ಇದಕ್ಕೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸುವಾಗಲೇ ಅಭ್ಯರ್ಥಿಗಳು ಕೋರಿಕೆ ಸಲ್ಲಿಸಬೇಕು. ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಗೆ ನಿಗದಿಪಡಿಸಿದ ಕೇಂದ್ರಗಳಲ್ಲಿಯೇ ಉಚಿತ ಪರೀಕ್ಷಾ ತರಬೇತಿಯನ್ನೂ ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ: (i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್‌ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್(CIBIL)ಸ್ಕೋರ್ 650 ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್‌ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ(NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯವಿಲ್ಲ.

(ಮುಂದಿನವಾರ: ಪರೀಕ್ಷೆಯಲ್ಲಿನ ಬದಲಾವಣೆ ಮತ್ತು ಪರೀಕ್ಷಾ ವಿಧಾನ ಕುರಿತ ಮಾಹಿತಿ)

(ಲೇಖಕರು: ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಮಡಿಕೇರಿ)

ಯಾವ ಬ್ಯಾಂಕ್ ಎಷ್ಟು ಹುದ್ದೆ?

* ಕೆನರಾ ಬ್ಯಾಂಕ್ 500 ಪಂಜಾಬ್ ಆ್ಯಂಡ್ ಸಿಂಧ ಬ್ಯಾಂಕ್ 125, ಸೆಂಟ್ರಲ್ ಬ್ಯಾಂಕ್ ಆಪ್ ಇಂಡಿಯಾ 2000, ಬ್ಯಾಂಕ್ ಆಫ್ ಇಂಡಿಯಾ 224, ಪಂಜಾಬ್ ನ್ಯಾಷನಲ್ ಬ್ಯಾಂಕ್ 200 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವುದಾಗಿ ಪ್ರಕಟಿಸಿವೆ.

* ಅರ್ಜಿ ಸಲ್ಲಿಸುವಾಗ ಅಭ್ಯರ್ಥಿ ಬ್ಯಾಂಕ್ ಆಯ್ಕೆ ಮಾಡಿಕೊಳ್ಳುವುದಕ್ಕೆ ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಬ್ಯಾಂಕ್ ಆದ್ಯತೆಯ ಆದೇಶವನ್ನು ಅಳವಡಿಸಲಾಗಿದೆ. ಅಭ್ಯರ್ಥಿಗಳು ಈ ಹಂತದಲ್ಲಿ ಅವರ ಬ್ಯಾಂಕ್ ಗಳ ಆದ್ಯತೆಯ ಕ್ರಮವನ್ನು ಅಗತ್ಯವಾಗಿ ಸೂಚಿಸಬೇಕು. l ಯಾವ್ಯಾವ ಬ್ಯಾಂಕ್ ಗಳಲ್ಲಿ ಎಷ್ಟೆಷ್ಟು

* ಹುದ್ದೆಗಳಿವೆ ಹಾಗೂ ನಮ್ಮ ರಾಜ್ಯದಲ್ಲಿ ಶಾಖೆಗಳಿವೆಯಾ ಎಂಬುದರ ಮೇಲೆ ನಿಮ್ಮ ಆದ್ಯತೆಯ ಆಯ್ಕೆ ಇರಲಿ.

* ಒಮ್ಮೆ ನೀವು ಆಯ್ಕೆಯಾದರೆ ನಂತರದ ದಿನಗಳಲ್ಲಿ ಬ್ಯಾಂಕ್ /ಸ್ಥಳ ಬದಲಾವಣೆಗಾಗಿ ಸಲ್ಲಿಸುವ ವಿನಂತಿಯನ್ನು ಪರಿಗಣಿಸಲಾಗುವುದಿಲ್ಲ.

* ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್‌ಮೆಂಟ್‌ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರು ವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ ಅಭ್ಯರ್ಥಿಯ ಉಮೇದುವಾರಿಕೆಯನ್ನ ರದ್ದುಗೊಳಿ ಸಲಾಗುವುದು.

ಹೀಗಾಗಿ ಅರ್ಜಿಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.