ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ 4,545 ಗುಮಾಸ್ತ(ಕ್ಲರ್ಕ್) ಹುದ್ದೆಗಳ ಭರ್ತಿಗಾಗಿ ಕರೆದಿದ್ದ ಅರ್ಜಿ ಸಲ್ಲಿಕೆ ದಿನಾಂಕವನ್ನು ಜುಲೈ 28ರವರೆಗೂ ವಿಸ್ತರಿಸಿದೆ.

ದೇಶದ 11 ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ 4,545 ಗುಮಾಸ್ತ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಕರೆಯಲಾಗಿತ್ತು. ಇದರಲ್ಲಿ ಕರ್ನಾಟಕದ ಭಾಗವಾಗಿ 253 ಹುದ್ದೆಗಳಿದ್ದು, ಅರ್ಜಿ ಸಲ್ಲಿಕೆಗೆ ಜುಲೈ 21 ಕೊನೆ ದಿನವಾಗಿತ್ತು. ಈಗ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿದೆ.

ಗುಮಾಸ್ತ ಹುದ್ದೆಗಳಿಗೆ ಪೂರ್ವಭಾವಿ ಹಾಗೂ ಮುಖ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದೆ. ಆನ್ಲೈನ್ ಮೂಲಕ (https://www.ibps.in)ಅರ್ಜಿ ಸಲ್ಲಿಸಬೇಕು.

ವಯೋಮಿತಿ:

ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. ಸರ್ಕಾರದ ನಿಯಮದಂತೆ ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್ಸಿ/ಎಸ್ಟಿ/ಅಂಕವಿಕಲರು/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಶೈಕ್ಷಣಿಕ ಅರ್ಹತೆ:

ಯಾವುದೇ ವಿಷಯದಲ್ಲಿ ಪದವಿ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್ಗೆ ಸಂಬಂಧಿಸಿದ ವಿಷಯ ದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (InformationTechnology)ಯನ್ನು ಒಂದು ವಿಷಯವಾಗಿ ಓದಿರಬೇಕು). ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತ ನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಪದವಿ ಪೂರ್ಣಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

ಸಂಪೂರ್ಣ ಮಾಹಿತಿಗಾಗಿ ಓದಿ: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ 4545 ಗುಮಾಸ್ತ ಹುದ್ದೆಗಳು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.