ಬೆಂಗಳೂರು: ದೆಹಲಿಯ ಕರ್ನಾಟಕ ಭವನದಲ್ಲಿ ಖಾಲಿ ಇರುವ 32 ಹುದ್ದೆಗಳ ಭರ್ತಿಗೆ ನಡೆದಿರುವ ನೇರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.

32 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಫೆಬ್ರುವರಿ 20ರಂದು ಅರ್ಜಿ ಆಹ್ವಾನಿಸಲಾಗಿತ್ತು. ಅರ್ಹ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮತ್ತು ಅನ್ವಯಿಸುವ ಹುದ್ದೆಗಳಿಗೆ ಪ್ರಾವೀಣ್ಯತೆ ಪರೀಕ್ಷೆಯನ್ನು ಇದೇ 24ರಂದು ಪೂರ್ಣಗೊಳಿಸಲಾಗಿದೆ. ತಾತ್ಕಾಲಿಕ ಆಯ್ಕೆಪಟ್ಟಿ ಹಾಗೂ ಕಾಯುವಿಕೆ ಪಟ್ಟಿಯನ್ನು www.karnatakabhavan.karnataka.gov.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.

ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 5ರೊಳಗೆ ಲಿಖಿತವಾಗಿ ಅಥವಾ ಇ–ಮೇಲ್ ಮೂಲಕ ಸಲ್ಲಿಸಬಹುದು ಎಂದು ಆಯ್ಕೆ ಸಮಿತಿಯ ಅಧ್ಯಕ್ಷರಾಗಿರುವ ದೆಹಲಿ ಕರ್ನಾಟಕ ಭವನದ ಉಪ ನಿವಾಸಿ ಆಯುಕ್ತ ಎಚ್. ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.