ಬೆಂಗಳೂರು: ‘2023–24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯ ಹೊಸ ದಿನಾಂಕವನ್ನು ಕೆಪಿಎಸ್‌ಸಿ ಶೀಘ್ರದಲ್ಲಿಯೇ ಪ್ರಕಟಿಸಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

‘X’ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ‘ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್‌ಸಿ ಆ. 25ರಂದು ನಡೆಸಲು ನಿರ್ಧರಿಸಿತ್ತು. ಅದೇ ದಿನ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ಗುಮಾಸ್ತ ಹುದ್ದೆಗಳಿಗೆ ಪರೀಕ್ಷೆ ನಡೆಸಲಿದೆ. ಈ ಬಗ್ಗೆ ಕೆಪಿಎಸ್‌ಸಿ ಜೊತೆ ಚರ್ಚಿಸಿದ್ದು, ಐಬಿಪಿಎಸ್ ಪರೀಕ್ಷಾರ್ಥಿಗಳ ಹಿತದೃಷ್ಟಿಯಿಂದ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯನ್ನು ಕೆಲ ದಿನಗಳಿಗೆ ಮುಂದೂಡುವಂತೆ ಸಲಹೆ ನೀಡಿದ್ದೇನೆ’ ಎಂದಿದ್ದಾರೆ.

‘ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಗೆ ಅಗತ್ಯ ಸಿದ್ಧತೆಗಳು ಆಗಿರುವ ಕಾರಣ ಆಗಸ್ಟ್ ತಿಂಗಳಲ್ಲೇ ಬೇರೊಂದು ದಿನ ಪರೀಕ್ಷೆ ನಡೆಸುವಂತೆ ಸಲಹೆ ನೀಡಿದ್ದೇನೆ’ ಎಂದೂ ಮುಖ್ಯಮಂತ್ರಿ ತಿಳಿಸಿದ್ದಾರೆ.
.ಗೆಜೆಟೆಡ್ ಪ್ರೊಬೇಷನರಿ | ಆ. 25ರ ಪರೀಕ್ಷೆ ಮುಂದೂಡಿಕೆ ಪರಿಗಣನೆ: ಪ್ರಿಯಾಂಕ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.