ಬೆಂಗಳೂರು: 2023–24 ನೇ ಸಾಲಿನ 384 ‘ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್’ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.

ಕೆಪಿಎಸ್‌ಸಿ ಪ್ರಭಾರಿ (ಇನ್‌ಚಾರ್ಜ್) ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ ಅವರು ಇಂದು ಈ ಅಧಿಸೂಚನೆ ಹೊರಡಿಸಿದ್ದಾರೆ.

ಇದೇ ಮಾರ್ಚ್ 4ರಿಂದ ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಏಪ್ರಿಲ್ 3 ಅರ್ಜಿ ಸಲ್ಲಿಸಲು ಕಡೆಯ ದಿನ.

ಅರ್ಜಿ ಸಲ್ಲಿಸುವ ಶುಲ್ಕ ಸಾಮಾನ್ಯ ವರ್ಗದವರಿಗೆ ₹600, ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ ₹300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹50 ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ–1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಮೇ 5 ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.

ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈ–ಕ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ –ಎ’ 159, ‘ಗ್ರೂಪ್ –ಬಿ’ 225 ಹುದ್ದೆಗಳಿವೆ.

ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು ಒಟ್ಟು 77.

ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನವಾದ ವಿದ್ಯಾರ್ಹತೆಯನ್ನು ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹ.

ಕನಿಷ್ಠ 21 ವರ್ಷ ವಯಸ್ಸು ಮೀರಿದವರು ಅರ್ಜಿ ಸಲ್ಲಿಸಲು ಅರ್ಹ. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 38, ಪ್ರವರ್ಗ 2ಎ, 2ಬಿ, 3ಎ, 3ಬಿಗಳಿಗೆ 41 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ–1 ಅಭ್ಯರ್ಥಿಗಳಿಗೆ 43 ವರ್ಷ.

ಪೂರ್ವಭಾವಿ ಪರೀಕ್ಷೆ (ಬಹುಆಯ್ಕೆ ಮಾದರಿಯ ಪ್ರಶ್ನೆಗಳು), ಮುಖ್ಯ ಪರೀಕ್ಷೆ (ವಿವರಣಾತ್ಮಕ) ಮತ್ತು ವ್ಯಕ್ತಿತ್ವ ಪರೀಕ್ಷೆ ಎಂಬ ಮೂರು ಹಂತಗಳಲ್ಲಿ ಈ ನೇಮಕಾತಿ ನಡೆಯಲಿದೆ. ವಿವರವಾದ ಅಧಿಸೂಚನೆಗೆ kpsc.kar.nic.in ಭೇಟಿ ನೀಡಬಹುದು.
.Court Jobs Recruitment 2024: ನ್ಯಾಯಾಲಯದಲ್ಲಿ ನೇಮಕಾತಿ.UPSC Exams 2024: ಅಧಿಸೂಚನೆ ಪ್ರಕಟ– ಇಲ್ಲಿದೆ ವಿವರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.