ನವದೆಹಲಿ: ಸಿಬಿಎಸ್ಇ ಬೋರ್ಡ್ ಪರೀಕ್ಷೆಯ ವೇಳಾಪಟ್ಟಿಯನ್ನು ಡಿ.31ರಂದು ಸಂಜೆ ಆರು ಗಂಟೆಗೆ ಪ್ರಕಟಿಸುವುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಶನಿವಾರ ರಾತ್ರಿ ಟ್ವೀಟ್ ಮಾಡಿದ್ದಾರೆ.

‘2021ನೇ ಸಾಲಿನಲ್ಲಿ ಸಿಬಿಎಸ್ಇ ಬೋರ್ಡ್ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಯಾವಾಗಿನಿಂದ ಪರೀಕ್ಷೆ ಆರಂಭವಾಗುವುದು ಎನ್ನುವುದನ್ನು ಡಿ.31ರಂದು ಘೋಷಿಸಲಿದ್ದೇನೆ’ ಎಂದು ಟ್ವೀಟ್ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಕೋವಿಡ್–19 ಕಾರಣದಿಂದಾಗಿ ಮುಂದಿನ ವರ್ಷದ ಫೆಬ್ರುವರಿಯವರೆಗೆ ಸಿಬಿಎಸ್ಇ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಕಳೆದ ಮಂಗಳವಾರ ನಿಶಾಂಕ್ ತಿಳಿಸಿದ್ದರು. ಪರಿಸ್ಥಿತಿಯನ್ನು ನೋಡಿಕೊಂಡು ಹಾಗೂ ತಜ್ಞರ ಜೊತೆ ಚರ್ಚೆ ನಡೆಸಿ, ಪರೀಕ್ಷೆ ನಡೆಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.