ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೂಲಕ ಕೃಷಿ ಕೋಟಾದಲ್ಲಿ ಬಿಎಸ್‌ಸಿ (ಅಗ್ರಿ)ಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಮೇ 17ರವರೆಗೆ ಮತ್ತೊಂದು ಅವಕಾಶ ನೀಡಲಾಗಿದೆ.

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಕೃಷಿ ಕೋಟಾದಲ್ಲಿ ಬಿಎಸ್‌ಸಿ (ಅಗ್ರಿ) ಪ್ರವೇಶಕ್ಕೆ ಸಲ್ಲಿದ್ದ 4 ಸಾವಿರಕ್ಕೂ ಹೆಚ್ಚು ಅರ್ಜಿಗಳು ತಿರಸ್ಕೃತಗೊಂಡಿವೆ. ಕೆಲ ವಿದ್ಯಾರ್ಥಿಗಳು ಅಗತ್ಯವಾದ ದಾಖಲೆಗಳನ್ನು ಸಲ್ಲಿಸಿಲ್ಲ. ಹಾಗಾಗಿ, ಮೇ 14ರಂದು ನಿಗದಿಯಾಗಿದ್ದ ಪರೀಕ್ಷಾ ದಿನಾಂಕವನ್ನು ಮುಂದೂಡಲಾಗಿದೆ. ದಾಖಲೆ ಅಪ್‌ಲೋಡ್ ಮಾಡಲು ಮತ್ತಷ್ಟು ಸಮಯ ನೀಡಲಾಗಿದೆ ಎಂದು ಕೆಇಎ ಹೇಳಿದೆ.

ಕೃಷಿ ಕೋಟಾದ ಅಡಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಕೃಷಿ ಪ್ರಮಾಣಪತ್ರ, ವಂಶ ವೃಕ್ಷ (ಅವಿಭಜಿತ ಕುಟುಂಬಕ್ಕೆ ಸೇರಿದವರಾಗಿದ್ದರೆ ಮಾತ್ರ), ಆದಾಯ ಪ್ರಮಾಣಪತ್ರ ಮತ್ತು ಕೃಷಿ ಕುಟುಂಬದ ಆದಾಯದ ಏಕೈಕ ಮೂಲ ಎಂದು ದೃಢೀಕರಿಸುವ ಅಫಿಡವಿಟ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ವಿದ್ಯಾರ್ಥಿಗಳು ಅರ್ಜಿ ಜತೆಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಕೆಇಎ ಅವುಗಳನ್ನು ಪ್ರಾಯೋಗಿಕ ಪರೀಕ್ಷೆಯನ್ನು ನಡೆಸುವ ಅಧಿಕಾರ ಹೊಂದಿರುವ ಕೃಷಿ ವಿಶ್ವವಿದ್ಯಾಲಯಕ್ಕೆ ಕಳುಹಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.