1. ನಾನು 2018ರಲ್ಲಿ ಬಿಇ (ಸಿವಿಲ್ ಎಂಜಿನಿಯರಿಂಗ್) ಮುಗಿಸಿ, ಹೊರಗುತ್ತಿಗೆ ಮೂಲಕ ಸಣ್ಣ ನೀರಾವರಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಇತ್ತೀಚೆಗೆ ಎಸ್ಕ್ಯುಎಲ್ ಕುರಿತ ಲೇಖನ ಓದಿದ ನಂತರ ಐಟಿ ಕ್ಷೇತ್ರದ ಕೋರ್ಸ್ ಮಾಡುವುದೇ ಅಥವಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬಹುದೇ ಎಂಬ ಗೊಂದಲದಲ್ಲಿದ್ದೇನೆ. ಬಿಇ ಮಾಡಿ ಐದು ವರ್ಷಗಳಾದರೂ ಬದುಕಿನಲ್ಲಿ ನೆಲೆಯೂರಲಾಗಿಲ್ಲ. ಮಾರ್ಗದರ್ಶನ ನೀಡಿ.

ವಿ.ವಿಜಯಕುಮಾರ್, ಚಿಕ್ಕಬಳ್ಳಾಪುರ

ಮೊದಲಿಗೆ, ಎಂಜಿನಿಯರಿಂಗ್ ಮಾಡಿದ ನಂತರವೂ ಉತ್ತಮ ಉದ್ಯೋಗ ಸಿಗದಿರಲು ಕಾರಣಗಳೇನು ಎಂದು ಮೌಲ್ಯಮಾಪನ ಮಾಡಬೇಕು. ಸಾಮಾನ್ಯವಾಗಿ, ಉದ್ಯೋಗದಲ್ಲಿ ಯಶಸ್ವಿಯಾಗಲು ಎಂಜಿನಿಯರಿಂಗ್ ಜ್ಞಾನದ ಜೊತೆಗೆ ಪ್ರಾಥಮಿಕ ಮತ್ತು ವೃತ್ತಿ ಸಂಬಂಧಿತ ಕೌಶಲಗಳ ಅಗತ್ಯವಿರುತ್ತದೆ. ಉದ್ಯೋಗದ ಸಂದರ್ಶನಗಳಲ್ಲಿ, ಇವುಗಳು ಅಭ್ಯರ್ಥಿಗಳಲ್ಲಿವೆಯೇ ಎಂದು ಪರೀಕ್ಷಿಸಲಾಗುತ್ತದೆ. ಉದಾಹರಣೆಗೆ, ಪ್ರಾಥಮಿಕ ಕೌಶಲಗಳಾದ ಸಮಯದ ನಿರ್ವಹಣೆ, ಸಂವಹನ ಕೌಶಲ, ಅಂತರ್-ವೈಯಕ್ತಿಕ ಕೌಶಲ ಮತ್ತು ನಾಯಕತ್ವದ ಕೌಶಲಗಳು ಯಾವುದೇ ವೃತ್ತಿಯಲ್ಲಿ ಮುಖ್ಯವಾಗುತ್ತದೆ. ಹಾಗೂ ವೃತ್ತಿ ಸಂಬಂಧಿತ ಕೌಶಲಗಳಾದ ಯೋಜನೆಯ ನಿರ್ವಹಣೆ, ತಾಂತ್ರಿಕ ಕೌಶಲ, ವಿಶ್ಲೇಷಾತ್ಮಕ ಕೌಶಲ, ಇತ್ಯಾದಿ ಕೌಶಲಗಳೂ ಎಂಜಿನಿಯರಿಂಗ್ ಉದ್ಯೋಗದ ಆಕಾಂಕ್ಷಿಗಳಲ್ಲಿರಬೇಕು.

ಹಾಗಾಗಿ, ನಿಮ್ಮ ಶಕ್ತಿ, ಸಾಮರ್ಥ್ಯ, ಕುಂದು ಕೊರತೆಗಳನ್ನರಿತು, ಪ್ರಾಮಾಣಿಕ ಪ್ರಯತ್ನಗಳಿಂದ ಈ ಕೌಶಲಗಳನ್ನು ವ್ಯಕ್ತಿತ್ವದಲ್ಲಿ ಮೈಗೂಡಿಸಿಕೊಳ್ಳಬೇಕು. ನಮ್ಮ ಅಭಿಪ್ರಾಯದಂತೆ, ಕ್ಷಿಪ್ರ ಗತಿಯಲ್ಲಿ ಅಭಿವೃದ್ಧಿಯಾಗುತ್ತಿರುವ ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಸುಮಾರು ಅರು ತಿಂಗಳುಗಳಲ್ಲಿ ಉತ್ತಮವಾದ ಕೆಲಸವನ್ನು ಪಡೆಯುವುದು ನಿಮ್ಮ ಮೊದಲ ಆದ್ಯತೆಯಾಗಿರಲಿ. ಇದು ಸಾಧ್ಯವಾಗದಿದ್ದರೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಮಾಡಬಹುದು.

ವ್ಯಕ್ತಿತ್ವ ಮತ್ತು ವೃತ್ತಿಗೆ ಸಂಬಂಧಿಸಿದ ಕೌಶಲಗಳನ್ನು ಕಲಿಯಲು ಇಂದು ವಿಭಿನ್ನವಾದ ಮತ್ತು ವಿಸ್ತಾರವಾದ ಅವಕಾಶಗಳಿವೆ. ವ್ಯಕ್ತಿತ್ವ ವೃದ್ಧಿಸುವ ಕೇಂದ್ರಗಳು, ಕೌಶಲ ತರಬೇತಿ ಕೇಂದ್ರಗಳು, ಕೌಶಲ ಆಯೋಗಗಳು, ಆನ್ಲೈನ್ ತರಗತಿಗಳು, ಸಾಧಕರ ಯಶಸ್ಸಿನ ಕಥೆಗಳು, ವಿಡಿಯೊಗಳು, ಪುಸ್ತಕಗಳು ಇತ್ಯಾದಿಗಳನ್ನು ಉಪಯೋಗಿಸಿಕೊಂಡು ವ್ಯಕ್ತಿತ್ವದ ಪರಿಪೂರ್ಣತೆಯನ್ನು ಗಳಿಸಿ, ವೃತ್ತಿ ಜೀವನವನ್ನು ಯಶಸ್ವಿಯಾಗಿ ರೂಪಿಸಿಕೊಳ್ಳಬಹುದು.

ಸಂದರ್ಶನಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/watch?v=T_z3ngIeyWk

2. ನಾನು ಕಳೆದ ವರ್ಷ ಬಿ.ಎಸ್ಸಿ ಮುಗಿಸಿ ಪಿಎಸ್ಐ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದೇನೆ. ಆದರೆ, ಪಿಎಸ್ಐ ಅಧಿಸೂಚನೆ ಇನ್ನೂ ಪ್ರಕಟವಾಗಿಲ್ಲ. ಇದರ ನಡುವೆ, ಎಂಎಸ್ಸಿ ಓದುವುದೋ ಬೇಡವೋ ಗೊತ್ತಿಲ್ಲ. ದಯವಿಟ್ಟು ಸಲಹೆ ನೀಡಿ.

ಚಂದನ್, ಬೆಂಗಳೂರು.

ನಿಮ್ಮ ವೃತ್ತಿ ಮತ್ತು ವೈಯಕ್ತಿಕ ಬದುಕಿನ ಗುರಿಗಳೇನು ಎಂದು ಮೊದಲು ಸ್ಪಷ್ಟವಾಗಬೇಕು. ಪಿಎಸ್ಐ ವೃತ್ತಿಯ ಅವಕಾಶಗಳು, ಎಂಎಸ್ಸಿ ನಂತರದ ವೃತ್ತಿಯ ಅವಕಾಶಗಳು ಹಾಗೂ ಆಯಾ ವೃತ್ತಿಗಳ ಯಶಸ್ಸಿಗೆ ಬೇಕಾದ ಜ್ಞಾನ, ಪ್ರಾಥಮಿಕ ಮತ್ತು ವೃತ್ತಿಪರ ಕೌಶಲಗಳು ವಿಭಿನ್ನವಾಗಿವೆ. ಆದ್ದರಿಂದ, ನಿಮ್ಮ ಆಸಕ್ತಿ, ಅಭಿರುಚಿ, ಸಾಮರ್ಥ್ಯಗಳು, ಕೌಶಲಗಳ ಆಧಾರದ ಮೇಲೆ ವೃತ್ತಿಯೋಜನೆಯನ್ನು ಮಾಡಿದರೆ ಮುಂದಿನ ಹಾದಿ ಸ್ಪಷ್ಟವಾಗುತ್ತದೆ.

ವೃತ್ತಿಯೋಜನೆಯನ್ನು ಮಾಡುವ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ: https://www.youtube.com/@ExpertCareerConsultantAuthor ಹೆಚ್ಚಿನ ಮಾರ್ಗದರ್ಶನದ ಅಗತ್ಯವಿದ್ದರೆ, ಖುದ್ದಾಗಿ ಭೇಟಿ ಮಾಡಬಹುದು.

3. ನಾನು ಬಿ.ಕಾಂ. ಪದವಿ ಮುಗಿಸಿ ಎಂಕಾಂ ಸ್ನಾತಕೋತ್ತರ ಪದವಿಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪಡೆದಿರುವೆ. ಪ್ರಸ್ತುತ, ನಾನು ಕನ್ನಡದಲ್ಲಿ ಎಂಎ ಮಾಡಬಹುದೇ?

ಪ್ರಮೋದ್ ಮೂರ್ತಿ, ಚಾಮರಾಜನಗರ.

ನಮ್ಮ ಅಭಿಪ್ರಾಯದಂತೆ, ನೀವು ಎಂಎ (ಕನ್ನಡ) ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಗಮನಿಸಿ: https://ksoumysuru.ac.in/

4. ನಾನು 2017ರಲ್ಲಿ ದ್ವಿತೀಯ ಪಿಯುಸಿ ಉತ್ತೀರ್ಣನಾಗಿದ್ದೇನೆ. ಆದರೆ, ಅಂಕಗಳು ಕಡಿಮೆ ಬಂದಿದ್ದು, ಈಗ ಮತ್ತೊಮ್ಮೆ ಪರೀಕ್ಷೆ ಬರೆಯಬಹುದೇ?

ಸುನೀಲ್ ಕುಮಾರ್, ಬಾಗಲಕೋಟೆ.

ಇತ್ತೀಚೆಗಷ್ಟೇ, ದ್ವಿತೀಯ ಪಿಯುಸಿ ಅಭ್ಯರ್ಥಿಗಳಿಗೆ (ಪುನರಾವರ್ತಿತ) ಈಗಿರುವ ನಿಯಮವನ್ನು ಬದಲಾಯಿಸಿ, ಗರಿಷ್ಠ ಮೂರು ವಾರ್ಷಿಕ ಪರೀಕ್ಷೆಗಳನ್ನು ಬರೆಯುವ ಅವಕಾಶವನ್ನು ನೀಡುವ ಪ್ರಸ್ತಾವನೆಯಾಗಿದೆ. ಹಾಗಾಗಿ, ಶಿಕ್ಷಣ ಇಲಾಖೆಯ ಅಧಿಕೃತ ಅಧಿಸೂಚನೆಯ ನಂತರ, ನಿಯಮಾವಳಿಗಳ ಅನುಸಾರ, ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮತ್ತೆ ಬರೆಯಬಹುದು.

ವಿದ್ಯಾರ್ಥಿಗಳೇ, ನಿಮ್ಮ ಮುಂದಿನ ಕೋರ್ಸ್ ಮತ್ತು ಸೂಕ್ತವಾದ ವೃತ್ತಿಯ ಆಯ್ಕೆ ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳುವ ಬಗ್ಗೆ ಗೊಂದಲಗಳಿವೆಯೇ? ಹಾಗಿದ್ದರೆ ನಮಗೆ ಬರೆಯಿರಿ. ನಿಮ್ಮ ಪ್ರಶ್ನೆಗಳಿಗೆ ಶಿಕ್ಷಣತಜ್ಞ ಮತ್ತು ವೃತ್ತಿ ಸಲಹೆಗಾರ ವಿ. ಪ್ರದೀಪ್ ಕುಮಾರ್ ಉತ್ತರಿಸಲಿದ್ದಾರೆ.
ಪ್ರಶ್ನೆಗಳನ್ನು shikshana@prajavani.co.in ಗೆ ಕಳಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.