ಬುಧವಾರ, 18 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿದ್ಯಾರ್ಥಿ ವೇತನ ಕೈಪಿಡಿ: ಆಸ್ಪೈರ್ ಸ್ಕಾಲರ್‌ಷಿಪ್

Published : 16 ಸೆಪ್ಟೆಂಬರ್ 2024, 0:20 IST
Last Updated : 16 ಸೆಪ್ಟೆಂಬರ್ 2024, 0:20 IST
ಫಾಲೋ ಮಾಡಿ
Comments

ಡಾ. ಅಜಯ್ ಚೌಧರಿ ಮತ್ತು ಅವರ ಕುಟುಂಬದಿಂದ ಸ್ಥಾಪನೆಗೊಂಡ ಲಾಭೇತರ ಸಂಸ್ಥೆಯಾಗಿದೆ. ಪ್ರತಿಷ್ಠಿತ ಎಂಜಿನಿಯರಿಂಗ್‌ ಸಂಸ್ಥೆಗಳಲ್ಲಿ ಬಿ.ಟೆಕ್‌ ಕೋರ್ಸ್‌ಗಳನ್ನು ಅಭ್ಯಾಸ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಗುರಿ ಹೊಂದಿದೆ. 

ಅರ್ಹತೆ:  ಬಿ.ಟೆಕ್. ಮೊದಲ ವರ್ಷದ ಕೋರ್ಸ್‌ಗಳಿಗೆ ಸೇರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ₹ 6 ಲಕ್ಷಗಳನ್ನು ಮೀರಬಾರದು.

ಆರ್ಥಿಕ ನೆರವು: ಬೋಧನಾ ಶುಲ್ಕಗಳು, ಹಾಸ್ಟೆಲ್ ಶುಲ್ಕಗಳು, ಆಹಾರ ಮತ್ತು ಸಂಬಂಧಿತ ವೆಚ್ಚಗಳಂತಹ ಶೈಕ್ಷಣಿಕ ಖರ್ಚುಗಳನ್ನು ಸರಿದೂಗಿಸಲು  ವಿದ್ಯಾರ್ಥಿವೇತನ.

ಅರ್ಜಿ ಸಲ್ಲಿಸಲು ಕೊನೆ ದಿನ:  20-09-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ:  Short Url: www.b4s.in/praja/ASPI2

ಕೋಟಕ್ ಕನ್ಯಾ ಸ್ಕಾಲರ್‌ಷಿಪ್

ಕಡಿಮೆ-ಆದಾಯ ಹೊಂದಿರುವ ಕುಟುಂಬಗಳಿಗೆ ಸೇರಿದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಂದ ಕೋಟಕ್ ಕನ್ಯಾ ಸ್ಕಾಲರ್‌ಶಿಪ್  ಅರ್ಜಿಗಳನ್ನು ಆಹ್ವಾನಿಸುತ್ತಿದೆ.

ಅರ್ಹತೆ: ಭಾರತದಾದ್ಯಂತದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 12ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ 75 ಅಥವಾ ಹೆಚ್ಚಿನ ಅಂಕಗಳನ್ನು ಅಥವಾ ತತ್ಸಮಾನ ಸಿಜಿಪಿಎಯನ್ನು ಗಳಿಸಿರಬೇಕು.

ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು ₹ 6,00,000ಕ್ಕಿಂತ ಕಡಿಮೆ ಇರಬೇಕು.

ಮಾನ್ಯತೆ ಪಡೆದ ಎನ್‌ಆರ್‌ಎಫ್/ ಎನ್‌ಎಎಸಿ ಯಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ 2024-25 ಶೈಕ್ಷಣಿಕ ವರ್ಷದಲ್ಲಿ ಎಂಜಿನಿಯರಿಂಗ್, ಎಂಬಿಬಿಎಸ್, ಬಿಡಿಎಸ್, ಇಂಟಿಗ್ರೇಟೆಡ್ ಎಲ್‌ಎಲ್‌ಬಿ (5 ವರ್ಷಗಳು), ಬಿ.ಎಸ್‌ಸಿ ನರ್ಸಿಂಗ್, ಬಿ.ಫಾರ್ಮಸಿ, ಇಂಟಿಗ್ರೇಟೆಡ್ ಬಿಎಸ್-ಎಂಎಸ್/ಬಿಎಸ್-ರಿಸರ್ಚ್ ಇನ್ ಐಎಸ್‌ಇಆರ್‌, ಐಐಎಸ್‌ಸಿ (ಬೆಂಗಳೂರು) ಅಥವಾ (ಡಿಸೈನ್, ಆರ್ಕಿಟೆಕ್ಚರ್, ಇತ್ಯಾದಿ) ಇತರ ವೃತ್ತಿಪರ ಕೋರ್ಸ್‌ಗಳಿಗೆ ಮೊದಲ ವರ್ಷಕ್ಕೆ ಪ್ರವೇಶ ಪಡೆದಿರಬೇಕು.

ಪ್ರತಿಭಾನ್ವಿತ ವಿದ್ಯಾರ್ಥಿನಿಯರು ಮಾತ್ರ ಈ ಸ್ಕಾಲರ್‌ಷಿಪ್‌ಗೆ ಅರ್ಹರಾಗಿರುತ್ತಾರೆ.

ಆರ್ಥಿಕ ಸಹಾಯ:  ವರ್ಷಕ್ಕೆ ₹1.5 ಲಕ್ಷ ಮಾತ್ರ

ಅರ್ಜಿ ಸಲ್ಲಿಸಲು ಕೊನೆ ದಿನ: 30-09-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: Short Url:www.b4s.in/praja/KKGS3

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT