1. ನಾನು ಪಿಯುಸಿ(ವಿಜ್ಞಾನ) ನಂತರ ಬಿಕಾಂ ಮುಗಿಸಿದ್ದೇನೆ. ನಂತರ, ಎಲ್‌ಎಲ್‌ಬಿ ಓದಿ, ವಕೀಲ ವೃತ್ತಿ ಮಾಡಬೇಕೆಂಬ ಬಯಕೆ ಇತ್ತು. ಆದರೆ, ಅದರಲ್ಲಿ ಯಶಸ್ಸು ಕಾಣುವುದಕ್ಕೆ ಬಹಳ ಸಮಯ ಹಿಡಿಯುವುದರಿಂದ, ನಾನು ಎರಡನೇ ಆಯ್ಕೆಯಾಗಿ ಎಂಬಿಎ ಆಯ್ಕೆ ಮಾಡಿಕೊಂಡೆ. ನನಗೆ ಇಂಗ್ಲಿಷ್ ಭಾಷಾ ಜ್ಞಾನದ ಕೊರತೆಯಿದೆ. ಆದರೆ, ವೇದಿಕೆ ಮೇಲೆ ಉತ್ತಮವಾಗಿ ಮಾತನಾಡುವ ಧೈರ್ಯವಿದೆ. ಹಾಗಾಗಿ, ನಾನು ಆಂಕರಿಂಗ್ ವೃತ್ತಿಗೆ ಹೋದರೆ ಹೇಗೆ? ಈ ಗೊಂದಲಗಳಿಗೆ ಪರಿಹಾರ ತಿಳಿಸಿ.

ಹೆಸರು, ಊರು ತಿಳಿಸಿಲ್ಲ.

ಎಲ್‌ಎಲ್‌ಬಿ ಬದಲು ಎಂಬಿಎ ಮಾಡುವ ಆಲೋಚನೆ ಸರಿಯಿದೆ ಎನಿಸುತ್ತದೆ. ಈಗ, ಎಂಬಿಎ ಸುಮಾರು 25ಕ್ಕೂ ಹೆಚ್ಚಿನ ವಿಭಾಗಗಳಲ್ಲಿ (ಇವೆಂಟ್ಸ್ ಮ್ಯಾನೇಜ್‌ಮೆಂಟ್, ಮಾರ್ಕೆಟಿಂಗ್, ಎಚ್‌ಆರ್, ಫೈನಾನ್ಸ್ ಇತ್ಯಾದಿ) ಮಾಡಬಹುದು. ಹಾಗಾಗಿ, ನಿಮ್ಮ ಸ್ವಾಭಾವಿಕ ಆಸಕ್ತಿ, ಅಭಿರುಚಿ ಯಾವ ವಿಭಾಗದಲ್ಲಿದೆ ಎಂದು ತಿಳಿದು ಅದರಂತೆ ಎಂಬಿಎ ಕೋರ್ಸ್ ಆಯ್ಕೆಯಿರಲಿ.

ಇಂಗ್ಲಿಷ್ ಭಾಷಾ ಪರಿಣತಿಗಾಗಿ, ಈ ಸಲಹೆಗಳನ್ನು ಅನುಸರಿಸಿ:
◦ ಓದುವುದು: ಇಂಗ್ಲಿಷ್ ದಿನ ಪತ್ರಿಕೆಗಳನ್ನು, ಪುಸ್ತಕಗಳನ್ನು, ಲೇಖನಗಳನ್ನು ದಿನನಿತ್ಯ ಓದಿ. ಪದಬಳಕೆ, ವಾಕ್ಯ ರಚನೆ, ವ್ಯಾಕರಣವನ್ನು ಗಮನಿಸಿ. ಸಾಧ್ಯವಾದರೆ, ಉಚ್ಛಾರಣೆಗೆ ಸಹಾಯವಾಗುವಂತೆ ಜೋರಾಗಿ ಓದಿ. ಅರ್ಥವಾಗದ ಪದಗಳನ್ನು ನಿಘಂಟಿನ ಮೂಲಕ ಅರ್ಥೈಸಿಕೊಳ್ಳಿ.

◦ ಮಾತನಾಡುವುದು: ಆತ್ಮೀಯರೊಂದಿಗೆ ಸರಳವಾದ ವಿಷಯಗಳನ್ನು ಮಾತನಾಡಲು ಪ್ರಯತ್ನಿಸಿ. ತಪ್ಪು-ಒಪ್ಪುಗಳಾದಲ್ಲಿ, ಸಂಕೋಚ ಪಡದೆ ಪ್ರಯತ್ನವನ್ನು ಮುಂದುವರೆಸಿ. ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಲು, ಕನ್ನಡಿಯ ಮುಂದೆ ಆಂಗಿಕ ಭಾಷೆಯನ್ನು ಬಳಸಿ ಮಾತನಾಡಿ.

◦ ಬರೆಯುವುದು: ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳ ವಾಕ್ಯರಚನೆಯಲ್ಲಿರುವ ವ್ಯತ್ಯಾಸಗಳನ್ನು ಗಮನಿಸಿ, ಕಂಪ್ಯೂಟರ್‌ನಲ್ಲಿಯೇ ಸರಳ ವಾಕ್ಯಗಳನ್ನು ರಚಿಸಿ, ಕಾಲಕ್ರಮೇಣ ಕ್ಲಿಷ್ಟವಾದ ವಾಕ್ಯಗಳನ್ನು ರಚಿಸಲು ಪ್ರಾರಂಭಿಸಿ. ನೀವು ರಚಿಸಿದ ವಾಕ್ಯಗಳ ವ್ಯಾಕರಣದಲ್ಲಿನ ಲೋಪದೋಷಗಳನ್ನು ಆಪ್ಸ್ (ಮೈಕ್ರೊಸಾಫ್ಟ್ ವರ್ಡ್, ಗ್ರಾಮರ್ಲಿ ಇತ್ಯಾದಿ) ಮೂಲಕ ಸರಿಪಡಿಸಿ. ಆಪ್ಸ್ ಸೆಟಿಂಗ್ಸ್ ಅನ್ನು ನಿಮ್ಮ ಅಗತ್ಯಕ್ಕೆ ತಕ್ಕಂತೆ ಹೊಂದಿಸಿ.

◦ ವೀಡಿಯೊ, ಚಲನಚಿತ್ರಗಳ ವೀಕ್ಷಣೆ: ಕನ್ನಡದ ಉಪಶೀರ್ಷಿಕೆಗಳಿರುವ ಇಂಗ್ಲಿಷ್ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು, ಸಾಕ್ಷ÷್ಯಚಿತ್ರಗಳನ್ನು ವೀಕ್ಷಿಸಿ. ಅದೇ ರೀತಿ, ಯೂಟ್ಯೂಬ್‌ನಲ್ಲಿ ಇಂಗ್ಲಿಷ್ ಕಲಿಕೆಗೆ ನೆರವಾಗುವ ವೀಡಿಯೋಗಳನ್ನು ವೀಕ್ಷಿಸಿ. ಸಾಧಕರ ಭಾಷಣಗಳನ್ನು ಕೇಳುವುದರಿಂದ ಪ್ರೇರೇಪಿತರಾಗುವುದರ ಜೊತೆಗೆ ಇಂಗ್ಲಿಷ್ ಕಲಿಯುವಿಕೆಗೆ ಸಹಾಯವಾಗುತ್ತದೆ.

◦ ಮೊಬೈಲ್ ಅಪ್ಲಿಕೇಶನ್ಸ್ ಬಳಕೆ: ಇಂಗ್ಲಿಷ್ ಕಲಿಕೆಗೆ ಅನುಕೂಲವಾಗುವ ಹಲವಾರು ಮೊಬೈಲ್ ಅಪ್ಲಿಕೇಶನ್ಸ್ಗಳಿವೆ (ಹಲೊ ಇಂಗ್ಲಿಷ್, ಡ್ಯುಒಲಿಂಗೊ, ಹಲೊ ಟಾಕ್ ಇತ್ಯಾದಿ). ಇವುಗಳನ್ನು ಬಳಸಿ.
ಈ ಸಲಹೆಗಳನ್ನು ನಿರಂತರವಾಗಿ ಕೆಲವು ತಿಂಗಳ ಕಾಲ ಅನುಸರಿಸಿದ ನಂತರ ನಿಮ್ಮ ಇಂಗ್ಲಿಷ್ ಕಲಿಕೆ ಒಂದು ಹಂತಕ್ಕೆ ತಲುಪುತ್ತದೆ. ಜೊತೆಗೆ, ಎಂಬಿಎ ಕಲಿಕೆಯಲ್ಲಿ ಇಂಗ್ಲಿಷ್ ಭಾಷಾ ಪರಿಣತಿ ಸಾಮಾನ್ಯವಾಗಿಯೇ ಹೆಚ್ಚಾಗುತ್ತದೆ.

ಎಂಬಿಎ ನಂತರ ವೃತ್ತಿ ಜೀವನವನ್ನು ಅನುಸರಿಸಿಕೊಂಡು, ನಿರೂಪಣೆಯ (ಆಂಕರಿಂಗ್) ಅವಕಾಶಗಳನ್ನು ಪ್ರವೃತ್ತಿಯಂತೆ ಬಳಸಿಕೊಳ್ಳಿ. ವೃತ್ತಿ ಯೋಜನೆಯನ್ನು ಮಾಡುವ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ:
https://www.youtube.com/@ExpertCareerConsultantAuthor

2. ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ 2ನೇ ವರ್ಷ ಓದುತ್ತಿದ್ದೇನೆ. ನಾನು ಇಂಡಿಯನ್ ಎಂಜಿನಿಯರಿಂಗ್ ಸರ್ವಿಸ್ ಪರೀಕ್ಷೆ ಬರೆಯಬೇಕು ಎಂದುಕೊಂಡಿದ್ದೇನೆ. ಇದಕ್ಕೆ ಸಿದ್ಧತೆ ಹೇಗೆ? ಯಾವಾಗ ಬರೆಯಬಹುದು?

ಪೃಥ್ವಿ, ಊರು ತಿಳಿಸಿಲ್ಲ.

ಕೇಂದ್ರ ಲೋಕಸೇವಾ ಆಯೋಗ ನಡೆಸುವ ಇಂಡಿಯನ್ ಎಂಜಿನಿಯರಿಂಗ್ ಸರ್ವೀಸಸ್ (ಐಇಎಸ್) ಪರೀಕ್ಷೆಯನ್ನು ಬರೆಯಲು ಎಂಜಿನಿಯರಿಂಗ್ ಪದವೀಧರರಿಗೆ ಅರ್ಹತೆ ಇರುತ್ತದೆ. ಈ ಪರೀಕ್ಷೆ ಮೂರು ಹಂತದಲ್ಲಿ ನಡೆಯುತ್ತದೆ:

• ಪೂರ್ವಭಾವಿ ಪರೀಕ್ಷೆ.
• ಮುಖ್ಯ ಪರೀಕ್ಷೆ.
• ವ್ಯಕ್ತಿತ್ವ ಪರೀಕ್ಷೆ/ಸಂದರ್ಶನ.

ಪೂರ್ವಭಾವಿ ಪರೀಕ್ಷೆಗೆ ಬೆಂಗಳೂರು, ಧಾರವಾಡ ಸೇರಿದಂತೆ ದೇಶದ ಅನೇಕ ನಗರಗಳಲ್ಲಿ ಪರೀಕ್ಷಾ ಕೇಂದ್ರಗಳಿರುತ್ತವೆ. ನೀವು ಎಂಜಿನಿಯರಿಂಗ್ ಕೋರ್ಸಿನ ಅಂತಿಮ ವರ್ಷದಲ್ಲಿರುವಾಗ ಅಂದಿನ ನಿಯಮಾವಳಿಗನ್ನು ಗಮನಿಸಿ, ಈ ಪರೀಕ್ಷೆಯನ್ನು ಬರೆಯಬಹುದು.

ಐಎಎಸ್ ಪರೀಕ್ಷೆಯಂತೆ ಇದೂ ಕೂಡ ಕಠಿಣವಾದ ಪರೀಕ್ಷೆ. ನೇಮಕಾತಿಗೆ ನೀವು ಆರಿಸಿಕೊಳ್ಳುವ ವಿಭಾಗಕ್ಕೆ (ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯೂನಿಕೇಷನ್) ಅನ್ವಯಿಸುವ ಪಠ್ಯಕ್ರಮವನ್ನು ಅರ್ಥಮಾಡಿಕೊಂಡು, ಈ ಸಲಹೆಗಳನ್ನು ಗಮನಿಸಿ ತಯಾರಾಗಬಹುದು:

• ಅಗತ್ಯವಾದ ಪುಸ್ತಕಗಳನ್ನು ಖರೀದಿಸಿ, ಖುದ್ದಾಗಿ ಅಥವಾ ಕೋಚಿಂಗ್ ಮುಖಾಂತರ ತಯಾರಿ ಮಾಡಬಹುದು.
• ನಿಗದಿತ ವೇಳಾಪಟ್ಟಿಯಂತೆ ಸಮಗ್ರವಾದ ಮತ್ತು ಆಳವಾದ ಓದುವಿಕೆ, ಪುನರಾವರ್ತನೆ ಮತ್ತು ಬರವಣಿಗೆ ಇರಬೇಕು.
• ಪರಿಶ್ರಮ, ಬದ್ಧತೆ, ಆತ್ಮ ವಿಶ್ವಾಸ ಮತ್ತು ಸಮಯದ ನಿರ್ವಹಣೆ ಅತ್ಯಗತ್ಯ.
• ಗೂಗಲ್ ಮತ್ತು ಯೂಟ್ಯೂಬಿನಲ್ಲಿ, ತಯಾರಿ ಕುರಿತ ಮಾಹಿತಿ ಮತ್ತು ಉಪಯುಕ್ತ ವಿಡಿಯೋಗಳನ್ನು ವೀಕ್ಷಿಸಿ.
ಹೆಚ್ಚಿನ ಮಾಹಿತಿಗಾಗಿ ಗಮನಿಸಿ: https://www.shiksha.com/exams/ies-exam

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.