ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಿಮ್ಮ ಪ್ರಶ್ನೆಗೆ ತಜ್ಞರ ಉತ್ತರ: ಎಂಬಿಎ ಮಾಡಿದರೆ ಭವಿಷ್ಯ ಇದೆಯೇ?

Published : 25 ಸೆಪ್ಟೆಂಬರ್ 2023, 7:27 IST
Last Updated : 25 ಸೆಪ್ಟೆಂಬರ್ 2023, 7:27 IST
ಫಾಲೋ ಮಾಡಿ
Comments
ಪ್ರ

ಈಗ ಬಿಬಿಎ ಮೂರನೇ ವರ್ಷದಲ್ಲಿದ್ದೇನೆ. ಮುಂದೆ ಎಂಬಿಎ ಮಾಡಬೇಕೆಂಬ ಇಚ್ಛೆಯಿದೆ. ಈ ನಿರ್ಧಾರ ಸರಿಯೇ? - ಹೆಸರು, ಊರು ತಿಳಿಸಿಲ್ಲ.

ಬಿಬಿಎ ನಂತರ ಎಂಬಿಎ ಕೋರ್ಸ್ ಉತ್ತಮ ಆಯ್ಕೆ. ಉದ್ಯಮಗಳ ಅಭಿವೃದ್ಧಿಗೆ ಸಂಪನ್ಮೂಲಗಳನ್ನು ವ್ಯವಸ್ಥಿತವಾಗಿ ಉಪಯೋಗಿಸುವ ಯೋಜನೆಗಳನ್ನು ರಚಿಸಿ, ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವುದೇ ಮ್ಯಾನೇಜ್‌ಮೆಂಟ್‌ನ ಮೂಲ ಉದ್ದೇಶ. ಈ ಜವಾಬ್ದಾರಿಗಳನ್ನು ನಿರ್ವಹಿಸಲು, ಸಮಗ್ರವಾದ ಜ್ಞಾನ ಮತ್ತು ಕೌಶಲಗಳನ್ನು ಎಂಬಿಎ ಕೋರ್ಸಿನಲ್ಲಿ ನೀಡಲಾಗುತ್ತದೆ. ಇದಲ್ಲದೆ, ಉದ್ಯಮಗಳಲ್ಲಿ ಪ್ರಾಯೋಗಿಕವಾದ ತರಬೇತಿಯನ್ನು ಪ್ರಾಜೆಕ್ಟ್‌ಗಳ  ಮುಖಾಂತರ ನೀಡುವುದರಿಂದ ಕಲಿಕೆ ಪರಿಪೂರ್ಣವಾಗುತ್ತದೆ. ನಿಪುಣತೆ ಮತ್ತು ಚತುರತೆ ವರ್ಧಿಸಿ, ಯಾವುದೇ ಕೆಲಸವನ್ನು ನಿಭಾಯಿಸುವ ಆತ್ಮವಿಶ್ವಾಸ ಬೆಳೆಯುತ್ತದೆ. ಎಲ್ಲಕ್ಕಿಂತ ಪ್ರಮುಖವಾಗಿ, ಎಂಬಿಎ ಕೋರ್ಸಿನಲ್ಲಿ ವೃತ್ತಿಗೂ, ಜೀವನಕ್ಕೂ ಅಗತ್ಯ ಮೂಲಭೂತ ತತ್ವಗಳ, ಮೌಲ್ಯಗಳ ಮನದಟ್ಟಾಗುತ್ತದೆ. ಈ ತತ್ವಗಳ ಆಧಾರದ ಮೇಲೆ, ನೀವು ವೃತ್ತಿ ಮತ್ತು ಖಾಸಗಿ ಜೀವನಗಳೆರಡರಲ್ಲೂ ಯಶಸ್ಸು ಸಾಧಿಸಬಹುದು. ಆದ್ದರಿಂದಲೇ, ಎಂಬಿಎ ಕೋರ್ಸ್ ಜನಪ್ರಿಯ.  ದೇಶದಲ್ಲಿ ಸುಮಾರು 5,000ಕ್ಕೂ ಹೆಚ್ಚಿನ ಎಂಬಿಎ ಕಾಲೇಜುಗಳಿದ್ದು, ಸಿಎಟಿ, ಪಿಜಿಸಿಯಿಟಿಗಳಂತಹ ಪರೀಕ್ಷೆಗಳ ಮೂಲಕ ಪ್ರವೇಶದ ಆಯ್ಕೆಯಾಗುತ್ತದೆ. ಕ್ಯಾಂಪಸ್ ನೇಮಕಾತಿ ಇರುವ, ಉತ್ತಮ ರ‍್ಯಾಂಕಿಂಗ್ಇ ರುವ ಪ್ರತಿಷ್ಠಿತ ಕಾಲೇಜು/ ವಿಶ್ವವಿದ್ಯಾಲಯದಲ್ಲಿ ಎಂಬಿಎ ಮಾಡಬೇಕು. ಈ ಮಾಹಿತಿಯನ್ನು ಅನೇಕ ಮಾಧ್ಯಮಗಳು ಅಂತರ್ಜಾಲದಲ್ಲಿ ಪ್ರಕಟಿಸುತ್ತವೆ.

ಹೆಚ್ಚಿನ ಮಾರ್ಗದರ್ಶನಕ್ಕಾಗಿ ಈ ವಿಡಿಯೊ ವೀಕ್ಷಿಸಿ

ADVERTISEMENT
ಪ್ರ

ನಾನು ಬಿ.ಟೆಕ್ (ಕಂಪ್ಯೂಟರ್ ಸೈನ್ಸ್) ಅಂತಿಮ ವರ್ಷದಲ್ಲಿದ್ದೇನೆ. ಇದಾದ ನಂತರ ಸಾಕಷ್ಟು ಶೈಕ್ಷಣಿಕ ಸಾಲವಿರುವುದರಿಂದ, ಕೆಲಸಕ್ಕೆ ಸೇರಬೇಕೇ ಅಥವಾ ಎಂಟೆಕ್ ಮಾಡುವುದೇ ಎಂಬ ಗೊಂದಲದಲ್ಲಿದ್ದೇನೆ. ದಯವಿಟ್ಟು ನಿಮ್ಮ ಮಾರ್ಗದರ್ಶನ ನೀಡಿ - ಹೆಸರು, ಊರು ತಿಳಿಸಿಲ್ಲ.

ಬಿ.ಟೆಕ್ (ಕಂಪ್ಯೂಟರ್ ಸೈನ್ಸ್) ಬೇಡಿಕೆಯಲ್ಲಿರುವ ಕ್ಷೇತ್ರ. ಸಾಮಾನ್ಯವಾಗಿ, ಈ ವಿಭಾಗದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿಯ ಅವಕಾಶವಿರುತ್ತದೆ. ಹಾಗಾಗಿ, ನಮ್ಮ ಅಭಿಪ್ರಾಯದಂತೆ, ನೀವು ಕ್ಯಾಂಪಸ್ ನೇಮಕಾತಿಯ ಮೂಲಕ ವೃತ್ತಿಯನ್ನು ಅರಸಬಹುದು. ಹಾಗೂ, ಎಂಟೆಕ್ ಪದವಿಯನ್ನು ಅರೆಕಾಲಿಕ/ವಾರಾಂತ್ಯದ ತರಗತಿಗಳ ಮೂಲಕ ಮಾಡಬಹುದು. ಅಥವಾ, ಕೆಲವು ವರ್ಷಗಳ ವೃತ್ತಿಯ ಅನುಭವದ ನಂತರ, ಕಂಪ್ಯೂಟರ್ ಸೈನ್ಸ್‌ ವಿಭಾಗಗಳಲ್ಲಿ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಡೇಟಾ ಅನಾಲಿಟಿಕ್ಸ್, ಸೈಬರ್ ಸೆಕ್ಯೂರಿಟಿ, ರೊಬೊಟಿಕ್ಸ್ ಇತ್ಯಾದಿ) ನಿಮ್ಮ ಅಗತ್ಯಕ್ಕೆ ಅನುಗುಣವಾಗಿ, ಪೂರ್ಣಾವಧಿ ಎಂಟೆಕ್ ಮಾಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT