ಹೊಸಪೇಟೆ (ವಿಜಯನಗರ): ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ಮೂವರು ತಲಾ 596 ಅಂಕ ಗಳಿಸುವ ಮೂಲಕ ಟಾಪರ್‌ಗಳಾಗಿ ಹೊರ ಹೊಮ್ಮಿದ್ದಾರೆ. ಈ ಪೈಕಿ ಜಿಲ್ಲೆಯ ಕೊಟ್ಟೂರು ಇಂದು ಪಿಯು ಕಾಲೇಜಿನ ಕವಿತಾ ಬಿ.ವಿ. ಅವರೂ ಒಬ್ಬರಾಗಿದ್ದಾರೆ.

ಕೂಡ್ಲಿಗಿ ತಾಲ್ಲೂಕು ಚೌಡಾಪುರದ ಕೃಷಿಕರಾದ ವೀರಬಸಪ್ಪ ಮತ್ತು ವಿಶಾಲಮ್ಮ ದಂಪತಿಯ ಪುತ್ರಿ ಕವಿತಾ ಅವರು ಈ ಸಾಧನೆ ಮಾಡಿದ್ದು, ಈ ಮೂಲಕ ಕೊಟ್ಟೂರಿನ ಇಂದು ಕಾಲೇಜು ಸತತ ಒಂಭತ್ತನೇ ವರ್ಷವೂ ದ್ವಿತೀಯ ಪಿಯು ರ‍್ಯಾಂಕ್ ಪಟ್ಟಿಯಲ್ಲಿ ತನ್ನ ಹೆಸರನ್ನು ಉಳಿಸಿಕೊಂಡಂತಾಗಿದೆ.

ವಿಜಯನಗರ ಪ್ರತ್ಯೇಕ ಜಿಲ್ಲೆಯಾಗಿ ಮೂರು ವರ್ಷವಾಗಿದ್ದರೂ, ಪಿಯು ವಿಭಾಗ ಇನ್ನೂ ವಿಭಜನೆಗೊಂಡಿಲ್ಲ. ಅಖಂಡ ಬಳ್ಳಾರಿ ಜಿಲ್ಲೆ ಶೇ 74.70 ಫಲಿತಾಂಶದೊಂದಿಗೆ ರಾಜ್ಯದಲ್ಲಿ 29ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷ ಜಿಲ್ಲೆಯಲ್ಲಿ ಶೇ 69.55 ಫಲಿತಾಂಶ ದಾಖಲಾಗಿತ್ತು.
.Karnataka 2nd PUC Result 2024: ರಾಜ್ಯದ ಶೇ 81.15 ವಿದ್ಯಾರ್ಥಿಗಳು ಉತ್ತೀರ್ಣ.Karnataka 2nd PUC Results 2024: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.