ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಆ.27ರಂದು ಪೂರ್ವಭಾವಿ ಪರೀಕ್ಷೆ ನಡೆಸುತ್ತಿದ್ದು, ಪರೀಕ್ಷೆ ನಡೆಯುವ ಎಲ್ಲ 564 ಕೇಂದ್ರಗಳ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪರೀಕ್ಷಾ ಕೇಂದ್ರವಾಗಿ 214 ಸರ್ಕಾರಿ, 189 ಅನುದಾನಿತ ಹಾಗೂ 161 ಖಾಸಗಿ ಶಾಲಾ–ಕಾಲೇಜುಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಕಾರ ನೀಡಬೇಕು. ಅಗತ್ಯ ಆದೇಶಗಳನ್ನು ಹೊರಡಿಸುವ ಮೂಲಕ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದೆ.

ಪರೀಕ್ಷೆಗೆ ಹಾಜರಾಗುವ ಸರ್ಕಾರಿ, ಅನುದಾನಿತ ಸಂಸ್ಥೆಗಳ ನೌಕರರು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸೇವಾ ನಿರತರಿಗೆ ಅಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಆದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.