'ಪ್ರಜಾವಾಣಿ' ಪಾಲಿಗಿದು ಅಮೃತ ಮಹೋತ್ಸವದ ವರ್ಷ. 75 ವರ್ಷಗಳ ಹಾದಿಯಲ್ಲಿ ಜನಮುಖಿಯಾಗಿರುವ ಪತ್ರಿಕೆ, ನಮ್ಮ ನಡುವಿನ ಪ್ರತಿಭಾವಂತರನ್ನು ಗುರುತಿಸುವ ಕೆಲಸವನ್ನೂ ಲಾಗಾಯ್ತಿನಿಂದ ಮಾಡುತ್ತಾ ಬಂದಿದೆ. 2020ರಿಂದ ಪ್ರತಿವರ್ಷ ಆಯಾ ಇಸವಿಯ ಕೊನೆಯ ಎರಡು ಅಂಕಿಗಳಿಗೆ ಹೊಂದುವಷ್ಟು ಸಂಖ್ಯೆಯ ಸಾಧಕರನ್ನು ಆಯ್ಕೆ ಮಾಡಿ, ಸನ್ಮಾನಿಸುತ್ತಿರುವುದೇ ಇದಕ್ಕೆ ಸಾಕ್ಷಿ. ಶಿಕ್ಷಣ, ಸಮಾಜಸೇವೆ, ವಿಜ್ಞಾನ, ಕ್ರೀಡೆ, ಸಾಹಿತ್ಯ–ಕಲೆ–ಮನರಂಜನೆ, ಪರಿಸರ, ಉದ್ಯಮ, ಸಂಶೋಧನೆ, ಆಡಳಿತ, ಕನ್ನಡ ಕೈಂಕರ್ಯ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮಷ್ಟಕ್ಕೆ ತಾವು ಮುಗುಮ್ಮಾಗಿ ಸೇವೆ ಸಲ್ಲಿಸುತ್ತಿರುವವರನ್ನು 23 ಸಾಧಕರನ್ನು 2023ರ ಹೊಸವರ್ಷಕ್ಕೆ ಸಾಂಕೇತಿಕವಾಗಿ ಮಾಡಲಾಗಿದೆ. ಸಾಧಕರ ಕಿರು ಪರಿಚಯವನ್ನು ಇಲ್ಲಿ ನೀಡಲಾಗಿದ್ದು, ಅವರ ಹೆಜ್ಜೆಗುರುತುಗಳು ಈ ಅಕ್ಷರಚೌಕಟ್ಟನ್ನೂ ಮೀರಿದ್ದು. ಹೊಸ ವರ್ಷವನ್ನು ಈ ಸಾಧಕರೊಟ್ಟಿಗೆ ಬರಮಾಡಿಕೊಳ್ಳುವುದಕ್ಕೆ ಪತ್ರಿಕಾ ಬಳಗ ಹರ್ಷಿಸುತ್ತದೆ.

ಹೆಸರು: ದಾದಾಪೀರ್ ಜೈಮನ್

ವೃತ್ತಿ: ಗಣಿತ ಶಿಕ್ಷಕ

ಸಾಧನೆ: ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಕಥೆಗಾರ

ತಮ್ಮ ಚೊಚ್ಚಲ ಕಥಾ ಸಂಕಲನ ’ನೀಲಕುರಿಂಜಿ‘ಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರಕ್ಕೆ ಭಾಜನರಾದ ದಾದಾಪೀರ್ ಜೈಮನ್ ಕನ್ನಡದ ಹೊಸ ತಲೆಮಾರಿನ ಭರವಸೆಯ ಕವಿ, ಕಥೆಗಾರ. ಅವರ ಬರಹದ್ದು ಮೃದು ಮತ್ತು ನವಿರು ಧೋರಣೆ. ಆ ಮೂಲಕವೇ ತಮ್ಮ ಕಥೆ, ಕವಿತೆ ಹಾಗೂ ಅನುವಾದಗಳಲ್ಲಿ ಜೈಮನ್ ಸ್ವಂತಿಕೆಯನ್ನು ಕಂಡುಕೊಳ್ಳಲು ಹವಣಿಸುತ್ತಿರುವುದು ಎದ್ದು ಕಾಣುತ್ತದೆ. ಬೆಂಗಳೂರಿನ ಶಾಲೆಯ ಈ ಗಣಿತದ ಮೇಷ್ಟ್ರು, ಸಂಖ್ಯೆಗಳ ಜತೆ ಸರಸವಾಡಿದಷ್ಟೇ ಸಲೀಸಾಗಿ ಪದಗಳಿಗೂ ಜೀವ ತುಂಬಬಲ್ಲವರು. ಅವರು ಅನುವಾದಿಸಿದ ’ಪರ್ದಾ & ಪಾಲಿಗಾಮಿ‘ ಕೃತಿಗೆ ಕುವೆಂಪು ಭಾಷಾ ಭಾರತಿ ಪುರಸ್ಕಾರ ಸಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.