ಬೆಂಗಳೂರು: ರಾಜ್ಯದಲ್ಲಿ ಈವರೆಗೆ ಸರ್ಕಾರಿ ವಿಶ್ವವಿದ್ಯಾಲಯಗಳು ಮತ್ತು ಶಿಕ್ಷಣ ಸಂಸ್ಥೆಗಳಷ್ಟೇ ಕೃಷಿ ವಿಜ್ಞಾನ ಕಾಲೇಜುಗಳನ್ನು ನಡೆಸುತ್ತಿದ್ದವು. ಈಗ ನಿರ್ಬಂಧ ಸಡಿಲಿಸಿರುವ ಕೃಷಿ ಇಲಾಖೆ, ಖಾಸಗಿ ಕಾಲೇಜುಗಳಿಗೂ ಕೃಷಿ ವಿಜ್ಞಾನ ಕಾಲೇಜು ಆರಂಭಿಸುವ ಅವಕಾಶವನ್ನು ಮುಕ್ತಗೊಳಿಸಿದೆ.

ರಾಮನಗರ ಜಿಲ್ಲೆ ಕನಕಪುರದ ಎಸ್.ಕರಿಯಪ್ಪ ಕೃಷಿ ಕಾಲೇಜು ಮತ್ತು ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ಗೆ 2024–25ನೇ ಶೈಕ್ಷಣಿಕ ವರ್ಷದಿಂದ ಕೃಷಿ ವಿಜ್ಞಾನ ಕಾಲೇಜುಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಕಾಲೇಜುಗಳು ಕಾರ್ಯಾರಂಭ ಮಾಡಲಿವೆ.

ಎಸ್.ಕರಿಯಪ್ಪ ಕೃಷಿ ಕಾಲೇಜು ರಾಮನಗರ ಜಿಲ್ಲೆಯ ಕನಕಪುರದಲ್ಲಿ ಹಾಗೂ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ತುಮಕೂರು ಜಿಲ್ಲೆಯ ತುರುವೇಕರೆ ತಾಲ್ಲೂಕಿನ ಮಾಯಸಂದ್ರದಲ್ಲಿ ಕೃಷಿ ವಿಜ್ಞಾನ ಕಾಲೇಜು ಆರಂಭಿಸಲು ಅನುಮತಿ ಕೋರಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದವು. ವಿಶ್ವವಿದ್ಯಾಲಯದ ಸ್ಥಳೀಯ ವಿಚಾರಣಾ ಸಮಿತಿ ಅರ್ಜಿಗಳನ್ನು ಪರಿಶೀಲಿಸಿ, ಸಂಯೋಜನೆಗೆ ಅನುಮತಿ ನೀಡುವಂತೆ ಶಿಫಾರಸು ಮಾಡಿ ಪ್ರಸ್ತಾವ ಸಲ್ಲಿಸಿತ್ತು.

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಕಾಯ್ದೆ 2009ರ ನಿಯಮ 44 ಹಾಗೂ ಸ್ಥಳೀಯ ವಿಚಾರಣಾ ಸಮಿತಿಯ ಸ್ಥಳ ಪರಿಶೀಲನಾ ವರದಿಯ ಶಿಫಾರಸಿನ ಅನ್ವಯ ಸಲ್ಲಿಸಿದ ಪ್ರಸ್ತಾವವನ್ನು ಕೃಷಿ ಇಲಾಖೆ ಅನುಮೋದಿಸಿದೆ. ಕೆಲವು ಷರತ್ತುಗಳೊಂದಿಗೆ ಕೃಷಿ ವಿಜ್ಞಾನ ಕಾಲೇಜುಗಳನ್ನು ಆರಂಭಿಸಲು ಮಾನ್ಯತೆ ನೀಡುವಂತೆ ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೂಚಿಸಿತ್ತು.

ಕೃಷಿ ಇಲಾಖೆಯ ಒಪ್ಪಿಗೆ ದೊರಕಿದ ನಂತರ, ಸಂಬಂಧಿಸಿದ ಸಂಸ್ಥೆಗಳಿಗೆ ಕಾಲೇಜುಗಳನ್ನು ಆರಂಭಿಸುವಂತೆ ಕೃಷಿ ವಿಶ್ವವಿದ್ಯಾಲಯವು ಸೂಚನೆ ನೀಡಿದೆ. ಜೊತೆಗೆ, ಈ ಎರಡೂ ಸಂಸ್ಥೆಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ವ್ಯಾಪ್ತಿಗೆ ಸೇರಿಸಿಕೊಳ್ಳುವ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೂ ಪತ್ರ ಬರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಶಾಶ್ವತ ಅನುದಾನರಹಿತ: ಕೃಷಿ ಕಾಲೇಜುಗಳಿಗೆ ಸರ್ಕಾರ ಯಾವುದೇ ಅನುದಾನ ನೀಡುವುದಿಲ್ಲ, ಇದನ್ನು ಶಾಶ್ವತ ಅನುದಾನ ರಹಿತ ಕೃಷಿ ಕಾಲೇಜು ಎಂಬುದಾಗಿ ಪರಿಗಣಿಸಬೇಕು. ನಿಗದಿತ ವಿದ್ಯಾರ್ಥಿ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತಿಲ್ಲ. ಸರ್ಕಾರದ ನಿಯಮಾವಳಿ, ಆದೇಶಗಳು ಹಾಗೂ ವಿಶ್ವವಿದ್ಯಾಲಯದ ನೀತಿ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ವಿದ್ಯಾರ್ಥಿಗಳ ಪ್ರವೇಶಾತಿಯಲ್ಲಿ ರೋಸ್ಟರ್ ಪದ್ಧತಿಯನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.

ಮಾನ್ಯತೆ ನೀಡಿರುವ ಕಾಲೇಜುಗಳು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ಕಾಯ್ದೆ 2009ರ ನಿಯಮಾವಳಿ ಮತ್ತು ಭಾರತೀಯ ಕೃಷಿ ಅನುಸಂಧಾನ ಪರಿಷತ್(ಐಸಿಎಆರ್) ಮಾರ್ಗಸೂಚಿಗಳನ್ನು ಪಾಲಿಸಿವೆಯೇ ಎಂದು ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಖಚಿತಪಡಿಸಿಕೊಳ್ಳಬೇಕು. ತಪ್ಪಿದ್ದಲ್ಲಿ ಸಂಬಂಧಿಸಿದ ವಿಶ್ವವಿದ್ಯಾಲಯವೇ ಸಂಪೂರ್ಣ ಜವಾಬ್ದಾರಿಯಾಗಿರುತ್ತದೆ ಎಂದು ಷರತ್ತಿನಲ್ಲಿ ಹೇಳಲಾಗಿದೆ.

‘ಐಸಿಎಆರ್ ಮಾದರಿಯಲ್ಲಿ ಒಪ್ಪಿಗೆ’

‘ದೇಶದ ವಿವಿಧ ಭಾಗಗಳಲ್ಲಿ ಕೃಷಿ ವಿಜ್ಞಾನ ಕಾಲೇಜು ಆರಂಭಿಸಲು ಖಾಸಗಿ ಸಂಸ್ಥೆಗಳಿಗೆ ನವದೆಹಲಿಯ ಭಾರತೀಯ ಕೃಷಿ ಅನುಸಂದಾನ ಪರಿಷತ್(ಐಸಿಎಆರ್) ಈಗಾಗಲೇ ಅನುಮತಿ ನೀಡಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಎರಡು ಕಾಲೇಜುಗಳ ಆರಂಭಕ್ಕೆ ಖಾಸಗಿಯವರಿಗೆ ಅನುಮತಿ ನೀಡಲಾಗಿದೆ’ ಎಂದು ಬೆಂಗಳೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಸುರೇಶ್ ಎಸ್. ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

‘ಸರ್ಕಾರದ ಕೃಷಿ ವಿಜ್ಞಾನ ಕಾಲೇಜುಗಳಿಲ್ಲದ ಜಿಲ್ಲೆಗಳಲ್ಲಿ ಖಾಸಗಿ ಸಂಸ್ಥೆಗಳಿಗೆ ಕೃಷಿ ವಿಜ್ಞಾನ ಕಾಲೇಜು ಆರಂಭಿಸಲು ಆದ್ಯತೆ ನೀಡಲಾಗುತ್ತಿದೆ’ ಎಂದು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.