ಎಂಜಿನಿಯರಿಂಗ್ ಪದವೀಧರರಿಗೆ ಸರ್ಕಾರಿ ವಲಯದಲ್ಲಿ ಆಕರ್ಷಕ ಉದ್ಯೋಗಾವಕಾಶಗಳಿವೆ. ಮೂಲಸೌಕರ್ಯ ಅಭಿವೃದ್ಧಿ, ಲೋಕೋಪಯೋಗಿ, ಇಂಧನ, ಮಾಹಿತಿ ತಂತ್ರಜ್ಞಾನ, ನೀರಾವರಿ, ಯೋಜನೆ, ಸಾರಿಗೆ, ನಗರಾಭಿವೃದ್ಧಿ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಮುಂತಾದ ಇಲಾಖೆಗಳಲ್ಲಿ ಉದ್ಯೋಗವನ್ನು ಅರಸಬಹುದು. ಹಾಗೂ, ಯುಪಿಎಸ್‌ಸಿ, ಕೆಪಿಎಸ್‌ಸಿ, ರೈಲ್ವೇಸ್, ಬ್ಯಾಂಕಿಂಗ್ ಕ್ಷೇತ್ರಗಳಲ್ಲಿಯೂ ಮತ್ತು ಇಸ್ರೊ, ಡಿಆರ್‌ಡಿಒ, ಬಿಎಆರ್‌ಸಿ, ಸಿಎಸ್‌ಐಆರ್ ಮುಂತಾದ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಗಳಲ್ಲಿಯೂ ವೃತ್ತಿಯನ್ನು ಅರಸಬಹುದು.ನಿಮ್ಮ ಸ್ವಾಭಾವಿಕ ಪ್ರತಿಭೆ, ಆಸಕ್ತಿ ಮತ್ತು ಕೌಶಲಗಳನ್ನು ಗಮನಿಸಿ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಸರ್ಕಾರಿ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಬಹುದು.